ಮಂಡ್ಯ : ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ಗಣೇಶ ವಿಸರ್ಜನೆಯ ಸಂದರ್ಭದಲ್ಲಿ ನಡೆದಂತಹ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಸುಳ್ಳು ಮಾಹಿತಿ ಹಂಚಿಕೆ ಆರೋಪದ ಅಡಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹಾಗೂ ವಿಪಕ್ಷ ನಾಯಕ ಆರ್ ಅಶೋಕ ವಿರುದ್ಧ ನಾಗಮಂಗಲದ ಟೌನ್ ಠಾಣೆಯಲ್ಲಿ ದಾಖಲಾಗಿದೆ.
ಹೌದು ನಾಗಮಂಗಲದ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಳ್ಳು ಮಾಹಿತಿಗಳನ್ನು ಹಂಚಿದ್ದಾರೆ ಎಂದು ಆರೋಪ ಬದಲಾಗಿದ್ದು, ಇದೀಗ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹಾಗೂ ವಿಪಕ್ಷ ನಾಯಕ ಆರ್ ಅಶೋಕ ವಿರುದ್ಧ ಎಫ್ಐಆರ್ ದಾಖಲಾಗಿದೆ.
ಕೋಮುಗಲಭೆ ಸಂಬಂಧ ಸುಳ್ಳು ಮಾಹಿತಿ ಹಂಚಿಕೆ ಆರೋಪದ ಮೇಲೆ ಇದೀಗ ನಾಗಮಂಗಲ ಘಟನೆಗೆ ಸಂಬಂಧಿಸಿದ ವಿಡಿಯೋ, ಫೋಟೋ ಪೋಸ್ಟ್ ಮಾಡಿದ ಹಿನ್ನೆಲೆಯಲ್ಲಿ ಇದೀಗ ನಾಗಮಂಗಲದ ಟೌನ್ ಠಾಣೆಯಲ್ಲಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹಾಗೂ ವಿಪಕ್ಷ ನಾಯಕ ಆರ್ ಅಶೋಕ ವಿರುದ್ಧ ‘FIR’ ದಾಖಲಾಗಿದೆ.