ಬೆಂಗಳೂರು : ಹೊಸ ವರ್ಷಾಚರಣೆಯ ದಿನ ಕರ್ತವ್ಯನಿರತ ಸಹದ್ಯೋಗಿ ಯುವತಿಗೆ ಮದ್ಯಪಾನ ಮಾಡಿಸಿ ಲೈಂಗಿಕ ಕಿರುಕುಳ ನೀಡಿದ ಘಟನೆ ಬೆಂಗಳೂರಿನ ಅಶೋಕ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಯುವತಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಡಿ ಖಾಸಗಿ ಕಂಪನಿ ಮ್ಯಾನೇಜರ್ ಸೇರಿದಂತೆ ಮೂವರು ಆರೋಪಿಗಳ ವಿರುದ್ಧ ಪ್ರಕರಣ ದಾಖಲಾಗಿದೆ.
ಹೌದು ಬೆಂಗಳೂರಿನಲ್ಲಿ ಪಾರ್ಟಿಗೆ ಕರೆದೋಯ್ದು ಯುವತಿಗೆ ಲೈಂಗಿಕ ಕಿರುಕುಳ ನೀಡಲಾಗಿದೆ. ಬೆಂಗಳೂರಿನ ಅಶೋಕನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಒಂದು ಘಟನೆ ನಡೆದಿದೆ. ಯುವತಿಗೆ ಬಲವಂತವಾಗಿ ಮಧ್ಯಪಾನ ಮಾಡಿಸಿ ಲೈಂಗಿಕ ಕಿರುಕುಳ ನೀಡಲಾಗಿದೆ. ಖಾಸಗಿ ಕಂಪನಿಯ ವ್ಯವಸ್ಥಾಪಕ ಹೇಮಂತ್ ವಿರುದ್ಧ ಈ ಒಂದು ಗಂಭೀರವಾದ ಆರೋಪ ಕೇಳಿ ಬಂದಿದೆ.
ಖಾಸಗಿ ಕಂಪನಿ ಮ್ಯಾನೇಜರ್ ಹೇಮಂತ್ ಯುವತಿಯನ್ನು ಕಾರಿನಲ್ಲಿ ಕರೆದುಕೊಂಡು ಹೋಗಿದ್ದಾನೆ. ಅಲ್ಲದೇ ಯುವತಿಗೆ ಬಲವಂತವಾಗಿ ಮದ್ಯ ಕುಡಿಸಿ ಆಕೆಯ ಜೊತೆಗೆ ಅಸಭ್ಯವಾಗಿ ವರ್ತನೆ ತೋರಿದ್ದಾನೆ. ಕಾರಿನಲ್ಲಿ ಸುತ್ತಾಡಿಸಿ ಮಧ್ಯರಾತ್ರಿಯಲ್ಲಿಯೇ ರಸ್ತೆಯಲ್ಲಿ ಬಿಟ್ಟು ಹೋಗಿದ್ದಾರೆ ಎಂದು ಯುವತಿ ದೂರು ನೀಡಿದ್ದಾಳೆ.
ಸಹೋದ್ಯೋಗಿಗಳ ಜೊತೆ ಸೇರಿ ಕಾರಿನಲ್ಲಿ ಸುತ್ತಾಡಿಸಿದ್ದಾರೆ ಎಂದು ಯುವತಿ ಆರೋಪಿಸಿದ್ದಾಳೆ. ಸದ್ಯ ಯುವತಿಯ ದೂರಿನ ಅನ್ವಯ ಮೋರ ವಿರುದ್ಧ ಎಫ್ಐಆರ್ ದಾಖಲಾಗಿದೆ. ಖಾಸಗಿ ಕಂಪನಿ ವ್ಯವಸ್ಥಾಪಕ ಹೇಮಂತ್, ಪುನೀತ್ ಹಾಗೂ ಅಜೀತ್ ಎಂಬುವವರ ವಿರುದ್ಧ ಅಶೋಕ್ ನಗರ ಪೊಲೀಸ್ ಠಾಣೆಯಲ್ಲಿ FIR ದಾಖಲಾಗಿದೆ.