ಬೆಳಗಾವಿ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಅವಾಚ್ಯ ಪದ ಬಳಕೆ ಮಾಡಿದ್ದಾರೆ ಎನ್ನುವ ಆರೋಪದ ಬಳಿಕ ಬೆಳಗಾವಿಯ ಸುವರ್ಣಸೌಧದಲ್ಲಿ ಎಂಎಲ್ ಸಿ ಸಿ.ಟಿ ರವಿ ಮೇಲೆ ಹಲ್ಲೆ ಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ 10 ಜನರ ವಿರುದ್ಧ ಎಫ್ ಐಆರ್ ದಾಖಲಾಗಿದೆ.
ಬೆಳಗಾವಿ ಜಿಲ್ಲೆಯ ಹಿರೇಬಾಗೇವಾಡಿ ಪೊಲೀಸ್ ಠಾಣೆಯಲ್ಲಿ ಸಿ.ಟಿ. ರವಿ ಮೇಲೆ ಹಲ್ಲೆಗೆ ಯತ್ನಿಸಿದ್ದಾರೆ ಎನ್ನುವ ಆರೋಪದ ಹಿನ್ನೆಲೆಯಲ್ಲಿ 10 ಜನರ ಮೇಲೆ ಎಫ್ ಐಆರ್ ದಾಖಲಾಗಿದೆ.
ಹಿರೇಬಾಗೇವಾಡಿ ಪೊಲೀಸ್ ಠಾಣೆಯಲ್ಲಿ 10 ಜನ ಅಪರಿಚಿತರ ವಿರುದ್ಧ ಸುಮೊಟೊ ಅಡಿ ಪ್ರಕರಣ ದಾಖಲಿಸಿಕೊಂಡಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ ಎನ್ನಲಾಗಿದೆ.