ಬೆಂಗಳೂರು : ನಮ್ಮ ಮೆಟ್ರೋ ಟಿಕೆಟ್ ದರ ಹೆಚ್ಚಳ ಮಾಡಿದ್ದಕ್ಕಾಗಿ ನಿನ್ನೆ ಬೆಂಗಳೂರಿನ ಮೆಜೆಸ್ಟಿಕ್ ಬಳಿ ABVP ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದರು. ಇದೀಗ ಅನುಮತಿ ಪಡೆಯದೆ ಪ್ರತಿಭಟನೆ ಮಾಡಿದ್ದರಿಂದ ಎಬಿವಿಪಿಯ ಒಟ್ಟು 16 ಕಾರ್ಯಕರ್ತರ ವಿರುದ್ಧ ಬೆಂಗಳೂರಿನ ಕಾಟನ್ ಪೇಟೆ ಪೊಲೀಸ್ ಠಾಣೆಯಲ್ಲಿ FIR ದಾಖಲಾಗಿದೆ.
ಹೌದು ಬೆಂಗಳೂರಲ್ಲಿ ಮೆಟ್ರೋ ದರ ಏರಿಕೆ ಖಂಡಿಸಿ ಪ್ರತಿಭಟನೆ ಮಾಡಿದ್ದ ಎಬಿವಿಪಿ ಕಾರ್ಯಕರ್ತರ ವಿರುದ್ಧ ಇದೀಗ FIR ದಾಖಲಾಗಿದೆ. ಕಾಟನ್ ಪೇಟಿ ಠಾಣೆಯಲ್ಲಿ 16 ಜನರ ವಿರುದ್ಧ ದಾಖಲಾಗಿದೆ. ನಿನ್ನೆ ಮೆಜೆಸ್ಟಿಕ್ ಮೆಟ್ರೋ ನಿಲ್ದಾಣದ ಬಳಿ ಎಬಿವಿಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದರು. ಅನುಮತಿ ಪಡೆಯದೆ ಪ್ರತಿಭಟನೆ ಮಾಡಿದ್ದಕ್ಕಾಗಿ ಇದೀಗ 16 ಜನ ಎಬಿವಿಪಿ ಕಾರ್ಯಕರ್ತರ ವಿರುದ್ಧ ಬೆಂಗಳೂರಿನ ಕಾಟನ್ ಪೇಟೆ ಪೊಲೀಸ್ ಠಾಣೆಯಲ್ಲಿ FIR ದಾಖಲಾಗಿದೆ.