ಚಿಕ್ಕಮಗಳೂರು : ಬಿಜೆಪಿ ಎಂಎಲ್ ಸಿ ಸಿಟಿ ರವಿ ಬಂಧನ ಖಂಡಿಸಿ ಚಿಕ್ಕಮಗಳೂರಿನಲ್ಲಿ ನೂರಾರು ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದರು. ಹೀಗಾಗಿ ನೂರಾರು ಬಿಜೆಪಿ ಕಾರ್ಯಕರ್ತರ ವಿರುದ್ಧ ಎಫ್ ಐಆರ್ ದಾಖಲಾಗಿದೆ.
ಅನುಮತಿ ಇಲ್ಲದೇ ಚಿಕ್ಕಮಗಳೂರಿನಲ್ಲಿ ಅಂಗಡಿಗಳನ್ನು ಬಂದ್ ಮಾಡಿದ್ದಾರೆ. ಜೊತೆಗೆ ಸಾರ್ವಜನಿಕರಿಗೆ ತೊಂದರೆ ಕೊಟ್ಟಿದ್ದಾರೆ ಎಂದು ಆರೋಪಿಸಿ ಬಿಜೆಪಿ ಜಿಲ್ಲಾಧ್ಯಕ್ಷ ದೇವರಾಜ್ ಶೆಟ್ಟಿ, ಯುವಮೋರ್ಚಾ ಜಿಲ್ಲಾಧ್ಯಕ್ಷ ಸೇರಿದಂತೆ ನೂರಾರು ಬಿಜೆಪಿ ಕಾರ್ಯಕರ್ತರ ವಿರುದ್ಧ ಎಫ್ ಐಆರ್ ದಾಖಲಾಗಿದೆ.
ಚಿಕ್ಕಮಗಳೂರಿನ ಬಸವನಹಳ್ಳಿ ಠಾಣೆಯಲ್ಲಿ 5 ದೂರುಗಳು ದಾಖಲಾಗಿದ್ದರೆ, ನಗರ ಠಾಣೆಯಲ್ಲಿ 3 ಪ್ರಕರಣಗಳು ದಾಖಲಾಗಿದೆ ಎಂದು ವರದಿಯಾಗಿದೆ.