ಬೆಂಗಳೂರು: ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಮತ್ತು ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ವಿರುದ್ಧ ವಿವಿಧ ಕಾರಣಗಳಿಗಾಗಿ ಎಫ್ಐಆರ್ ದಾಖಲಿಸಲಾಗಿದೆ ಎಂದು ಚುನಾವಣಾ ಆಯೋಗ ಶನಿವಾರ ಪ್ರಕಟಿಸಿದೆ.
ಆರ್.ಆರ್.ನಗರದಲ್ಲಿ ಅಪಾರ್ಟ್ಮೆಂಟ್ ಮಾಲೀಕರನ್ನು ಉದ್ದೇಶಿಸಿ ಮಾತನಾಡುವಾಗ ಮಾದರಿ ನೀತಿ ಸಂಹಿತೆ (ಎಂಸಿಸಿ) ಉಲ್ಲಂಘಿಸಿದ ಆರೋಪದ ಮೇಲೆ ಶಿವಕುಮಾರ್ ವಿರುದ್ಧ ಎಫ್ಐಆರ್ ದಾಖಲಾಗಿದ್ದರೆ, ಚುನಾವಣೆಗೆ ಸಂಬಂಧಿಸಿದಂತೆ ಸುಳ್ಳು ಹೇಳಿಕೆಗಳನ್ನು ನೀಡಿದ್ದಕ್ಕಾಗಿ ಎಚ್ಡಿಕೆ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ.
ಏತನ್ಮಧ್ಯೆ, ಕರ್ನಾಟಕ ಬಿಜೆಪಿಯ ಅಧಿಕೃತ ಎಕ್ಸ್ ಹ್ಯಾಂಡಲ್ನಿಂದ ಕಾಂಗ್ರೆಸ್ ವಿರುದ್ಧ ಅವಹೇಳನಕಾರಿ ಪೋಸ್ಟ್ಗಳನ್ನು ಮಾಡಿದ ಆರೋಪವನ್ನು ವಿಜಯೇಂದ್ರ ವಿರುದ್ಧ ಹೊರಿಸಲಾಗಿದೆ.