ತುಮಕೂರು : ಕೃಷಿ ಹೊಂಡವೊಂದರಲ್ಲಿ ಸೋಡಿಯಂ ಮೆಟಲ್ ಬಳಸಿಕೊಂಡು, ಸ್ಫೋಟಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಡ್ರೋನ್ ಪ್ರತಾಪ್ ಹಾಗೂ ಕೃಷಿ ಹೊಂಡ ಜಮೀನು ಮಾಲಿಕನ ವಿರುದ್ಧ ಇದೀಗ ಮಿಡಿಗೇಶಿ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
ಪ್ರಕರಣಕ್ಕೆ ಸಂಬಂಧಪಟ್ಟಂತೆ ಈಗಾಗಲೇ ಪೊಲೀಸರು ಡ್ರೋನ್ ಪ್ರತಾಪ್ ಅವರನ್ನು ಅರೆಸ್ಟ್ ಮಾಡಿದ್ದು, ಡ್ರೋನ್ ಪ್ರತಾಪ ರನ್ನು ಘಟನಾ ಸ್ಥಳಕ್ಕೆ ಪೊಲೀಸರು ಇದೀಗ ಕರೆ ತರಲಿದ್ದಾರೆ. ಮಧುಗಿರಿ ತಾಲೂಕಿನ ಜನಕಲೋಟಿ ಗೆ ಪೊಲೀಸರು ಪ್ರತಾಪ್ ಅವರನ್ನು ಕರೆ ತರಲಿದ್ದಾರೆ. ತುಮಕೂರು ಜಿಲ್ಲೆಯ ಮಧುಗಿರಿ ತಾಲೂಕಿನ ಇಟ್ಟಕಲೋಟಿ ಗ್ರಾಮದ ಸ್ಫೋಟದ ಸ್ಥಳಕ್ಕೆ ಡ್ರೋನ್ ಪ್ರತಾಪ್ ಕರೆ ತಂದು ಮಹಜರು ಮಾಡುವ ಸಾಧ್ಯತೆ ಇದೆ ಎನ್ನಲಾಗಿದೆ.
ಜನಕಲೋಟಿ ಬಳಿ ಕೃಷಿ ಹೊಂಡಕ್ಕೆ ಪ್ರತಾಪ್ ಸೋಡಿಯಂ ಎಸೆದು ಸ್ಪೋತಿಸಿದ್ದ. ಶ್ರೀರಾಯರ ಬೃಂದಾವನ ಫಾರ್ಮ್ಸ್ ನಲ್ಲಿರುವ ಕೃಷಿಹೊಂಡದಲ್ಲಿ ಡ್ರೋನ್ ಪ್ರತಾಪ್ ಸ್ಪೋಟಗೊಳಿಸಿದ್ದ, ಇದೀಗ ಪ್ರತಾಪ್ ಭೂಮಿ ಮಾಲಿಕ ಜಿತೇಂದ್ರ ಕುಮಾರ್ ಜೈನ ವಿರುದ್ಧ ಇದೀಗ FIR ದಾಖಲಾಗಿದೆ.
ಪ್ರಕರಣ ಹಿನ್ನೆಲೆ
ಮಧುಗಿರಿ ತಾಲೂಕಿನ ಜನಕಲೋಟಿ ಗ್ರಾಮ ಸಮೀಪದ ಕೃಷಿ ಹೊಂಡವೊಂದರಲ್ಲಿ ಪ್ರತಾಪ್ ಸೋಡಿಯಂ ಮೆಟಲ್ ಬಳಸಿಕೊಂಡು, ಅದು ನೀರಿಗೆ ಬೆರೆತಾಗ ಹೇಗೆ ಸ್ಫೋಟವಾಗುತ್ತೆ ನೋಡಿ ಎಂಬ ಎಕ್ಸಪೆರಿಮೆಂಟ್ ಮಾಡಿರುವ ಸೈನ್ಸ್ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದರು.
ಇದರ ವಿರುದ್ಧ ಸಾಕಷ್ಟು ಟೀಕೆಗಳು ವ್ಯಕ್ತವಾಗಿದ್ದು, ಘಟನೆ ಸಂಬಂಧ BNS ಸೆಕ್ಷನ್ 288, ಸ್ಫೋಟವಸ್ತು ನಿಯಂತ್ರಣ ಕಾಯ್ದೆ 3ರಡಿ ಮಿಡಿಗೇಶಿ ಠಾಣೆಯ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದರು. ಈ ಹಿನ್ನೆಲೆಯಲ್ಲಿ ಮಿಡಿಗೇಶಿ ಪೊಲೀಸರು ಡ್ರೋನ್ ಪ್ರತಾಪ್ ರನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ. ಪ್ರತಾಪ್ ಸೈನ್ಸ್ ಹೆಸರಲ್ಲಿ ಇದೆಂಥಾ ಹುಚ್ಚಾಟ ಮಾಡುತ್ತಿದ್ದಾನೆ ಎಂತಲೂ ಕೆಲ ನೆಟ್ಟಿಗರು ತೀವ್ರ ತರಾಟೆಗೆ ತೆಗೆದುಕೊಂಡಿದ್ದಾರೆ.
ನೀರಿಗೆ ಸೋಡಿಯಂ ಮೆಟಲ್ ಹಾಕುತ್ತಿದ್ದಂತೆ ಅದು ತಕ್ಷಣ ದೊಡ್ಡ ಮಟ್ಟದಲ್ಲಿ ಸ್ಫೋಟವಾಗಿದ್ದಲ್ಲದೇ, ಶಬ್ಧ ಕೂಡ ದೊಡ್ಡ ಪ್ರಮಾಣದಲ್ಲೇ ಕೇಳಿಸಿತ್ತು. ಇದರ ಲೈವ್ ವಿಡಿಯೋವನ್ನು ಪ್ರತಾಪ್ ಹಂಚಿಕೊಂಡಿದ್ದ. ಪ್ರತಾಪ್ ಇದೇನು ಕಿತಾಪತಿಗೆ ಅಂತಾ ಕೆಲ ಪರಿಸರ ಪ್ರೇಮಿಗಳು ವಿರೋಧ ವ್ಯಕ್ತಪಡಿಸಿದ್ದಾರೆ.