ಬೆಂಗಳೂರೂ : ಬಿಜೆಪಿಯ ಶಾಸಕ ಕೆ.ಗೋಪಾಲಯಗೆ ಕೊಲೆ ಬೆದರಿಕೆ ಒಡ್ಡಿದ್ದು ಕೊಲೆ ಬೆದರಿಕೆ ಹಿನ್ನೆಲೆಯಲ್ಲಿ ಇದೀಗ ಮಾಜಿ ಕಾರ್ಪೊರೇಟರ್ ಪದ್ಮರಾಜು ವಿರುದ್ಧ ಕಾಮಾಕ್ಷಿಪಾಳ್ಯ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ ಎಂದು ಹೇಳಲಾಗುತ್ತಿದೆ.
ಬಿಜೆಪಿ ಶಾಸಕ ಕೆ ಗೋಪಾಲಯ್ಗೆ ಜೀವ ಬೆದರಿಕೆ ಕರೆ ಬಂದಿರುವ ಹಿನ್ನೆಲೆಯಲ್ಲಿ ಬೆಂಗಳೂರಿನ ಕಾಮಾಕ್ಷಿಪಾಳ್ಯ ಠಾಣೆಯಲ್ಲಿ ಮಾಜಿ ಕಾರ್ಪೊರೇಟರ್ ಪದ್ಮರಾಜು ವಿರುದ್ಧ ಎಫ್ FIR ದಾಖಲಾಗಿದೆ. ರಾತ್ರಿ 11:00 ಕರೆ ಮಾಡಿ ಅವಾಚ್ಯವಾಗಿ ನಿಂದನೆ ಮಾಡಿದ್ದು, ಅಲ್ಲದೆ ನಿಂದನೆ, ಕೊಲೆ ಬೆದರಿಕೆ ಹಿನ್ನೆಲೆಯಲ್ಲಿ FIR ದಾಖಲಾಗಿದೆ.
ಘಟನೆಗೆ ಸಂಬಂಧಿಸಿದಂತೆ ಮಾಧ್ಯಮದವರೊಂದಿಗೆ ಮಾತನಾಡಿದ ಗೋಪಾಲಯ್ಯ, ರಾತ್ರಿ 11:00ಗೆ ಕರೆ ಮಾಡಿ ನನಗೆ ಅವಾಚಕ ಶಬ್ದಗಳಿಂದ ಬೈದಿದ್ದಲ್ಲದೆ ಕೊಲೆ ಬೆದರಿಕೆ ಹಾಕಿದ್ದಾನೆ ನನಗೂ ನನ್ನ ಕುಟುಂಬದವರಿಗೂ ಅವಾಚ್ಯವಾಗಿನಿಂದನೆ ಮಾಡಿದ್ದಾನೆ. ಆದ್ದರಿಂದ ಕೂಡಲೇ ಪದ್ಮರಾಜುನನ್ನು ಗಡಿ ಪಾರು ಮಾಡಬೇಕು ಎಂದು ಇದೇ ವೇಳೆ ಅವರು ಆಗ್ರಹಿಸಿದರು. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಇದೀಗ ತನಿಖೆಯನ್ನು ನಡೆಸಿದ್ದಾರೆ ಎಂದು ತಿಳಿದುಬಂದಿದೆ.