ಬಳ್ಳಾರಿ : ಕಳೆದ ವರ್ಷ ಬಳ್ಳಾರಿ ಜಿಲ್ಲೆಯಲ್ಲಿ ಬಾಣಂತಿಯರ ಸರಣಿ ಸಾವು ಪ್ರಕರಣ ಇಡೀ ರಾಜ್ಯಾದ್ಯಂತ ಭಾರಿ ಸಂಚಲನ ಮೂಡಿಸಿತ್ತು. ಇದೀಗ ಬಳ್ಳಾರಿಯಲ್ಲಿ ಮತ್ತೊಂದು ಆಘಾತಕಾರಿ ಘಟನೆ ನಡೆದಿದ್ದು, ವಿಮ್ಸ್ ಆಸ್ಪತ್ರೆಯಲ್ಲಿ ಮಹಿಳಾ ಕಂಪ್ಯೂಟರ್ ಆಪರೇಟರ್ ಮೇಲೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧೀಕ್ಷಕ ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪ ಕೇಳಿ ಬಂದಿದೆ.
ಹೌದು ಬಳ್ಳಾರಿಯ ವಿಮ್ಸ್ ಆಸ್ಪತ್ರೆ ಆಡಳಿತ ವಿಭಾಗದಲ್ಲಿ ಲೈಂಗಿಕ ದೌರ್ಜನ್ಯ ನಡೆದಿದ್ದು, ಮಹಿಳಾ ಕಂಪ್ಯೂಟರ್ ಆಪರೇಟರ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪ ಕೇಳಿ ಬಂದಿದೆ. ಇಲಾಖೆಯ ಅಧೀಕ್ಷಕ ವಿ.ಕೆ ವೆಂಕಟೇಶ್ ವಿರುದ್ಧ ಈ ಒಂದು ಆರೋಪ ಕೇಳಿ ಬಂದಿದೆ. ಬಳ್ಳಾರಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧೀಕ್ಷಕ ವಿ.ಕೆ ವೆಂಕಟೇಶ್ ಮಹಿಳಾ ಕಂಪ್ಯೂಟರ್ ಆಪರೇಟರ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ.
ಬಳ್ಳಾರಿ ಮಹಿಳಾ ಠಾಣೆಯಲ್ಲಿ ವಿ.ಕೆ ವೆಂಕಟೇಶ್ ವಿರುದ್ಧ ಸಂತ್ರಸ್ತೆ ಇದೀಗ ದೂರು ನೀಡಿದ್ದಾಳೆ. ಸಂತ್ರಸ್ತೆಯ ದೂರಿನ ಮೇರೆಗೆ ಪೊಲೀಸರು ಇದೀಗ FIR ದಾಖಲಿಸಿಕೊಂಡಿದ್ದಾರೆ. ಲೈಂಗಿಕ ಕ್ರಿಯೆಗೆ ಸಹಕರಿಸದಿದ್ದರೆ ಕೆಲಸದಿಂದ ತೆಗೆಯುವುದಾಗಿ ವೆಂಕಟೇಶ್ ಬೆದರಿಕೆ ಹಾಕಿದ್ದಾನೆ ಎಂದು ಕೂಡ ದೂರಿನಲ್ಲಿ ಉಲ್ಲೇಖಸಿದ್ದಾಳೆ. ಈ ಕುರಿತು ಬಳ್ಳಾರಿಯ ಮಹಿಳಾ ಪೊಲೀಸ್ ಠಾಣೆಯಲ್ಲಿ ವೆಂಕಟೇಶ್ ವಿರುದ್ಧ ಎಫ್ಐಆರ್ ದಾಖಲಾಗಿದೆ.