ಮಂಡ್ಯ : ತಾಲೂಕಿನ ಕೆರೆಗೋಡು ಗ್ರಾಮದಲ್ಲಿ ಹನುಮಧ್ವಜ ತೆರವು ಗೊಳಿಸಿ ರಾಷ್ಟ್ರಧ್ವಜ ಏರಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ನಿನ್ನೆ ಹಿಂದೂ ಸಂಘಟನೆಯ ಕಾರ್ಯಕರ್ತರು ಪಾದಯಾತ್ರೆ ಹಾಗೂ ಪ್ರತಿಭಟನೆ ನಡೆಸಿದರು. ಇದೀಗ ಹಿಂದೂ ಕಾರ್ಯಕರ್ತರ ವಿರುದ್ಧ ಕೆರೆಗೋಡು ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.
ಜನವರಿ 28ರಂದು ಹಿಂದೂ ಕಾರ್ಯಕರ್ತರು ಪ್ರತಿಭಟನೆಯನ್ನು ನಡೆಸಿದ್ದರು ಮಂಡ್ಯ ತಾಲೂಕಿನ ಕೆರಗೋಡು ಗ್ರಾಮದಲ್ಲಿ ಈ ಪ್ರತಿಭಟನೆ ನಡೆದಿತ್ತು ಈ ವೇಳೆ ಅಧಿಕಾರಿಗಳು ಸಿಬ್ಬಂದಿ ಎಳೆದಾಡಿ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದ ಹಿನ್ನೆಲೆಯಲ್ಲಿ ಬಿಳಿದೇಗಲು ಗ್ರಾಮದ ಪ್ರತಾಪ್, ಹೊನಗವಳ್ಳಿ ಮಠ ಗ್ರಾಮದ ಅವಿನಾಶ್ ಕೆರಗೂಡು ಗ್ರಾಮದ ಪ್ರಕಾಶ ಸೇರಿ ಹಲವರ ವಿರುದ್ಧ ದಾಖಲು ಐಪಿಸಿ ಸೆಕ್ಷನ್ 143 353 149 ಅಡಿ ಕೇಸ್ ದಾಖಲಿಸಿದ ಪೊಲೀಸರು ತಹಸೀಲ್ದಾರ್ ಶಿವಕುಮಾರ್ ಬಿರಾದರ್ ದೂರಿನ ಅನ್ವಯ FIR ದಾಖಲಿಸಲಾಗಿದೆ.
ಕಳೆದ ಕೆಲವು ದಿನಗಳ ಹಿಂದೆ ಮಂಡ್ಯ ತಾಲೂಕಿನ ಕೆರೆಗೋಡು ಗ್ರಾಮದಲ್ಲಿ 108 ಅಡಿಯ ಹನುಮ ಧ್ವಜವನ್ನು ತರವುಗೊಳಿಸಿ ರಾಷ್ಟ್ರಧ್ವಜ ಬಾವುಟವನ್ನು ಏರಿಸಿದ್ದಕ್ಕೆ ತೀವ್ರವಾದ ಆಕ್ಷೇಪ ವ್ಯಕ್ತವಾಗಿತ್ತು. ಈ ಹಿನ್ನೆಲೆಯಲ್ಲಿ ಹಿಂದೂ ಸಂಘಟನೆಯ ಕಾರ್ಯಕರ್ತರು ಹಾಗೂ ಬಿಜೆಪಿ ನಾಯಕರು ಕೂಡ ಇದನ್ನು ವಿರೋಧಿಸಿ ನಿನ್ನೆ ಪ್ರತಿಭಟನೆ ಹಾಗೂ ಪಾದಯಾತ್ರೆ ಕೈಗೊಂಡಿದ್ದರು.
ಈ ವೇಳೆ ಬಿಜೆಪಿಯ ಮಾಜಿ ಸಚಿವ ಸಿಟಿ ರವಿ ಜೆಡಿಎಸ್ ನ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಕೆ ಆರ್ ಪಿ ಪಿ ಪಕ್ಷದ ಜನಾರ್ಧನ್ ರೆಡ್ಡಿ ಸೇರಿದಂತೆ ಅನೇಕ ರಾಜಕೀಯ ನಾಯಕರುಗಳು, ಮುಖಂಡರುಗಳು ಸೇರಿದಂತೆ ಈ ಒಂದು ಪಾದಯಾತ್ರೆ ಹಾಗೂ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದರು.