ಮಂಗಳೂರು : ಶಾಸಕ ವೇದವ್ಯಾಸ ಕಾಮತ್ ಅವರ ಪ್ರಚೋದನೆಯಿಂದ ಬಿಜೆಪಿ ಕಾರ್ಯಕರ್ತರು ಕಾಂಗ್ರೆಸ್ ಮುಖಂಡನ ಮೇಲೆ ಹಲ್ಲೆ ನಡೆಸಿರುವ ಆರೋಪ ಕೇಳಿ ಬಂದಿದ್ದು, ಇದೀಗ ಶಾಸಕ ವೇದವ್ಯಾಸ ಕಾಮತ್ ಸೇರಿ 11 ಜನರ ವಿರುದ್ಧ, FIR ದಾಖಲಾಗಿದೆ.
ಕಾಂಗ್ರೆಸ್ ಕಾರ್ಯಕರ್ತ ಯಶವಂತ್ ಪ್ರಭು ನೀಡಿದ ದೂರಿನ ಅನ್ವಯ ಶಾಸಕ ವೇದವಾಸ್ ಕಾಮತ್ ವಿರುದ್ಧ FIR ದಾಖಲಾಗಿದೆ. ನಿನ್ನೆ ರಾತ್ರಿ ಶಕ್ತಿ ನಗರದ ಬಳಿ ಕಾಂಗ್ರೆಸ್ ಕಾರ್ಯಕರ್ತ ಯಶವಂತ ಪ್ರಭು ಮೇಲೆ ಹಲ್ಲೆ ನಡೆದಿತ್ತು. ಏಳೆಂಟು ಬಿಜೆಪಿ ಕಾರ್ಯಕರ್ತರ ವಿರುದ್ಧ ಹಲ್ಲೆ ಆರೋಪ ಕೇಳಿ ಬಂದಿದೆ. ವೇದವ್ಯಾಸ ಕಾಮತ್ ಪ್ರಚೋದನೆಯಿಂದ ಹಲ್ಲೆ ನಡೆಸಿದ್ದಾರೆ ಎನ್ನುವ ಆರೋಪ ಕೇಳಿ ಬಂದಿದೆ.
ಶ್ರೀ ಕೃಷ್ಣ ಭಜನಾ ಮಂದಿರದ ಬ್ರಹ್ಮ ಕಳಶೋತ್ಸವ ಹಿನ್ನೆಲೆಯಲ್ಲಿ ಐವನ್ ಡಿಸೋಜಾ ಬರುತ್ತಾರೆಂದು ಕಾಂಗ್ರೆಸ್ ಕಾರ್ಯಕರ್ತರು ಸೇರಿದ್ದರು. ಈ ವೇಳೆ ಶಾಸಕ ವೇದವಾಸ್ ಕಾಮತ್ ಸ್ಥಳಕ್ಕೆ ಆಗಮಿಸಿ ದೇಗುಲಕ್ಕೆ ಕಲ್ಲು ಹೊಡೆಯುವವರಿಗೆ ಇಲ್ಲೇನು ಕೆಲಸ ಎಂದಿದ್ದರು. ಶಾಸಕ ವೇದವ್ಯಾಸ್ ಕಾಮತ್ ಮಾತಿಗೆ ಸ್ಥಳದಲ್ಲಿ ಗಲಾಟೆ ನಡೆದಿತ್ತು.
ಈ ವೇಳೆ ಅವನ ಕೈ ಕಾಲು ಮುರಿಯಿರಿ ಅಂದಿದ್ದಾಗಿ ಆರೋಪ ಕೇಳಿ ಬಂದಿದೆ. ವೇದವೇಸ್ ಕಾಮತ್ ವಿರುದ್ಧ ಯಶವಂತ ಪ್ರಭು ಗಂಭೀರವಾದ ಆರೋಪ ಮಾಡಿದ್ದಾರೆ ಶಾಸಕರ ಪ್ರಶೋದನೆಯಿಂದ ಹಲ್ಲೆ ಮಾಡಿದ್ದಾರೆ ಎಂದು ಆರೋಪಿಸಿ ಇದೀಗ ಯಶವಂತ ಪ್ರಭು ದೂರಿನ ಅಡಿ 11 ಜನರ ವಿರುದ್ಧ ಪ್ರಕರಣ ದಾಖಲಾಗಿದೆ.