ಕಲಬುರ್ಗಿ : ಸಚಿನ್ ಪಾಂಚಾಳ ಆತ್ಮಹತ್ಯೆ ಕುರಿತು ಸುದ್ದಿಗೋಷ್ಠಿಯಲ್ಲಿ ಮಾತನಾಡುವ ವೇಳೆ ಶ್ರೀರಾಮ ಸೇನೆಯ ರಾಷ್ಟ್ರೀಯ ಗೌರವಾಧ್ಯಕ್ಷ ಅಂದೋಲಾದ ಶ್ರೀ ಸಿದ್ಧಲಿಂಗ ಸ್ವಾಮೀಜಿ ಬಿ ಆರ್ ಅಂಬೇಡ್ಕರ್ ಹಾಗೂ ದಲಿತರಿಗೆ ಅಪಮಾನವಾಗುವ ರೀತಿಯಲ್ಲಿ ಮಾತನಾಡಿದ್ದಾರೆ ಎಂದು ಆರೋಪಿಸಿದ ಹಿನ್ನೆಲೆಯಲ್ಲಿ ಇದೀಗ ಬ್ರಹ್ಮಪುರ ಪೊಲೀಸ್ ಠಾಣೆಯಲ್ಲಿ ಅವರ ವಿರುದ್ಧ ‘FIR’ ದಾಖಲಾಗಿದೆ.
ಹೌದು ಸಚಿನ್ ಪಾಂಚಾಳ ಆತ್ಮಹತ್ಯೆ ಕುರಿತು ಸುದ್ಧಿಗೋಷ್ಠಿ ನಡೆಸಿ, ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಮತ್ತು ದಲಿತರಿಗೆ ಅಪಮಾನವಾಗುವ ರೀತಿಯಲ್ಲಿ ಆಂದೋಲಾ ಶ್ರೀ ಮಾತನಾಡಿದ್ದಾರೆ ಎಂದು ಆರೋಪಿಸಿ ಕಲಬುರಗಿಯ ಬಸವ ನಗರದ ನಿವಾಸಿ, ಹೋರಾಟಗಾರ ಅಮಲಪ್ಪ ಭೀಮಪ್ಪ ಹೊಸಮನಿ ಎಂಬುವವರು ಆಂದೋಲಾ ಶ್ರೀ ಸಿದ್ಧಲಿಂಗ ಸ್ವಾಮೀಜಿ ಅವರ ವಿರುದ್ಧ ದೂರು ನೀಡಿದ್ದಾರೆ.
ಸ್ವಾಮೀಜಿ ವಿರುದ್ಧ ಕೂಡಲೇ ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿ, ಅಮಲಪ್ಪ ಭೀಮಪ್ಪ ಹೊಸಮನಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು. ದೂರಿನನ್ವಯ ಸ್ವಾಮೀಜಿ ವಿರುದ್ಧ ಸೋಮವಾರ ಪ್ರಕರಣ ದಾಖಲಾಗಿದೆ ಎಂದು ತಿಳಿದು ಬಂದಿದೆ.