ಹಾವೇರಿ : ಹಾವೇರಿಯಲ್ಲಿ ಗೌರವದ ದುರಂತ ಒಂದು ನಡೆದಿದ್ದು ನೀರಿನ ಟ್ರ್ಯಾಕ್ಟರ್ ಒಂದು ನಿಯಂತ್ರಣ ತಪ್ಪಿ ಪಾದಚಾರಿಯ ಮೇಲೆ ಹರಿದ ಪರಿಣಾಮ ಸ್ಥಳದಲ್ಲೇ ಷಣ್ಮುಖ ಬಣಗಾರ್ (38) ಎನ್ನುವ ಪಾದಚಾರಿಯೊಬ್ಬರು ಸಾವನಪ್ಪಿರುವ ಘಟನೆ ಹಾವೇರಿ ಜಿಲ್ಲೆಯ ರಾಣೇಬೆನ್ನೂರು ತಾಲೂಕಿನ ಅರೆ ಮಲ್ಲಾಪುರ ಗ್ರಾಮದಲ್ಲಿ ನಡೆದಿದೆ.
ಹಾವೇರಿ ಜಿಲ್ಲೆಯ ರಾಣೆಬೆನ್ನೂರು ತಾಲೂಕಿನ ಅರೆಮಲ್ಲಾಪುರದಲ್ಲಿ ಈ ಒಂದು ಘಟನೆ ನಡೆದಿದೆ. ಚಾಲಕನ ಟ್ರ್ಯಾಕ್ಟರ್ ನಿಯಂತ್ರಣ ತಪ್ಪಿ ಪಾದಾಚಾರಿ ಮೇಲೆ ಹರಿದು ಸಾವನ್ನಪ್ಪಿದ್ದಾರೆ. ಸ್ಥಳಕ್ಕೆ ರಾಣಿಬೆನ್ನೂರು ಗ್ರಾಮೀಣ ಠಾಣೆಯ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ. ಟ್ರಾಕ್ಟರ್ ಮಾಲೀಕ ಮಾಲತೇಶ್ ಹಾಗೂ ಚಾಲಕ ಮಾರುತಿ ವಿರುದ್ಧ FIR ದಾಖಲಾಗಿದೆ.