ಬೆಂಗಳೂರು : ಬೆಂಗಳೂರಿನಲ್ಲಿ ಯುವತಿಯ ಮೇಲಿನ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಅತ್ಯಾಚಾರಿ ಆರೋಪಿಯ ಗುರುತು ಪತ್ತೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಪ್ರಕರಣದ ತನಿಖೆ ನಡೆಸುತ್ತಿರುವ ಪೊಲೀಸರು ಅತ್ಯಾಚಾರಿ ಆರೋಪಿಯ ಪತ್ತೆಗಾಗಿ ತೀವ್ರ ಶೋಧ ನಡೆಸಿದ್ದು, 40 ಜನರ ತಂಡ ರಚಿಸಿ ಅತ್ಯಾಚಾರಿ ಆರೋಪಿಗಾಗಿ ಹುಡುಕಾಟ ನಡೆಸಲಾಗಿದೆ. ಯುವತಿ ಸ್ನೇಹಿತ ನೀಡಿದ ದೂರು ನೀಡಿದ್ದು, ಹೆಚ್ ಎಸ್ ಆರ್ ಪೊಲೀಸ್ ಠಾಣೆಯಲ್ಲಿ ಎಫ್ ಐಆರ್ ದಾಖಲಾಗಿದ್ದು, ಹೆಚ್ ಎಸ್ ಆರ್ ಲೇಔಟ್ ಪೊಲೀಸರಿಂದ ತನಿಖೆ ಮುಂದುವರೆದಿದೆ.
ಬೆಂಗಳೂರಿನ ಕೋರಮಂಗಲದಲ್ಲಿ ಪಾರ್ಟಿ ಮುಗಿಸಿಕೊಂಡು ವಾಪಸ್ ಹೋಗುವಾಗ ಬೈಕ್ ಅಪಘಾತವಾಗಿದೆ. ಬಳಿಕ ಯುವತಿ ಆಟೋದಲ್ಲಿ ತೆರಳಿದ್ದಾರೆ. ಬಳಿಕ ಕಾಮುಕ ಯುವತಿಯನ್ನು ಕೋರಮಂಗಲದ ಬಳಿ ಇರುವ ಗೋಡೌನ್ ಬಳಿ ಅತ್ಯಾಚಾರ ಎಸಗಿ ಪರಾರಿಯಾಗಿದ್ದಾನೆ.
ಸದ್ಯ ಯುವತಿ ಮೇಲೆ ಅತ್ಯಾಚಾರ ಎಸಗಿದ ಆರೋಪಿಯ ಗುರುತು ಪತ್ತೆಯಾಗಿದ್ದು, ಹೆಚ್ ಎಸ್ ಆರ್ ಲೇಔಟ್ ಪೊಲೀಸ್ ಠಾಣೆಯ ಪೊಲೀಸರು ಆರೋಪಿಯ ಬಂಧನಕ್ಕೆ ಬಲೆ ಬೀಸಿದ್ದಾರೆ. ಯುವತಿ ಡಿಗ್ರಿ ಫೈನಲ್ ಇಯರ್ ಓದುತ್ತಿದ್ದರು ಎಂದು ತಿಳಿದುಬಂದಿದೆ
ಇನ್ನು ಹೆಬ್ಬಗೋಡಿ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸಂತ್ರಸ್ತೆಯ ಯುವತಿಯನ್ನು ಪೊಲೀಸ್ ಆಯುಕ್ತ ರಮಣ್ ಗುಪ್ತಾ ಭೇಟಿಯಾಗಿದ್ದು, ಪ್ರಕರಣದ ಕುರಿತು ಮಾಹಿತಿ ಪಡೆದುಕೊಂಡಿದ್ದಾರೆ.