ಹಾವೇರಿ : ಮುಸ್ಲಿಂ ಸಮುದಾಯದ ಕುರಿತು ಹೇಳಿಕೆ ನೀಡಿದ್ದರಿಂದ ಬಿಜೆಪಿ ಸಂಸದ ಬಸವರಾಜ್ ಬೊಮ್ಮಾಯಿ ವಿಧಾನ ಪರಿಷತ್ ಸದಸ್ಯ ಸಿಟಿ ರವಿ ಹಾಗೂ ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ನೀತಿ ಸಂಹಿತೆ ಉಲ್ಲಂಘಿಸಿದ ಹಿನ್ನೆಲೆಯಲ್ಲಿ ಇದೀಗ ಹಾವೇರಿ ಜಿಲ್ಲೆಯ ಶಿಗ್ಗಾವಿ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
ಹೌದು ಹಾವೇರಿ ಬಿಜೆಪಿ ಸಂಸದ ಬಸವರಾಜ ಬೊಮ್ಮಾಯಿ, ಎಂಎಲ್ಸಿ ಸಿಟಿ ರವಿ ಹಾಗೂ ಬಿಜೆಪಿ ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಎಫ್ಐಆರ್ ದಾಖಲಾಗಿದೆ. ಒಂದು ಸಮುದಾಯದ ಭಾವನೆಗೆ ಧಕ್ಕೆ ತಂದ ಆರೋಪದ ಅಡಿ ಕೇಸ್ ದಾಖಲಾಗಿದೆ. ಕಾಂಗ್ರೆಸ್ ಗೆ ಮತ ಹಾಕಿದರೆ ಇಲ್ಲಿ ಸ್ಥಾಪನೆ ಆಗೋದು ತಾಲಿಬಾನಿ ಸರ್ಕಾರ. ನಮ್ಮ ರಾಜ್ಯವನ್ನು ಲಾಡೆನ್, ಮುಲ್ಲಾ ಉಮರ್ ತರಹ ಆಡಳಿತ ಮಾಡುತ್ತಿದ್ದಾರೆ.ಯಾರು ಆಡಳಿತ ನಡೆಸುತ್ತಿದ್ದಾರೆ ಎಂದು ನಿಮಗೆ ಗೊತ್ತಲ್ವಾ ಎಂದು ಹೇಳಿಕೆ ನೀಡಿದ್ದಾರೆ.
ಒಂದು ಸಿದ್ದರಾಮಯ್ಯ ಇನ್ನೊಂದು ಡಿಕೆ ಶಿವಕುಮಾರ್. ಒಬ್ರು ಬ್ರದರ್ ಅಂತಾರೆ ಇನ್ನೊಬ್ಬರು ಸುನ್ನತ್ ಒಂದು ಮಾಡಿಸಿಕೊಂಡಿಲ್ಲ ಅಷ್ಟೆ ಮೈಸೂರು ಕೊಡಗು ಮಾಜಿ ಸಂಸದ ಪ್ರತಾಪ್ ಸಿಂಹ ಈ ಹೇಳಿಕೆ ನೀಡಿದ್ದರು. ವಕ್ಫ್ ಟ್ರಿಬ್ಯುಲ್ ಗೆ ಹೋದರೆ ಸುನ್ನತ್ ಕಟ್ ಮಾಡಿಸಿಕೊಂಡವರು ಇರುತ್ತಾರೆ ಎಂದು ವಿಧಾನ ಪರಿಷತ್ ಬಿಜೆಪಿ ಸದಸ್ಯ ಸಿಟಿ ರವಿ ಹೇಳಿಕೆ ನೀಡಿದ್ದರು. ಇದೀಗ ಬೊಮ್ಮಾಯಿ ಸಿಟಿ ರವಿ ಪ್ರತಾಪ್ ಸಿಂಹ ವಿರುದ್ಧ ಕೆಎಸ್ ದಾಖಲಾಗಿದೆ ನೀತಿ ಸಂಹಿತೆ ಉಲ್ಲಂಘನೆ ಆರೋಪದ ಅಡಿ ಶಿಗ್ಗಾವಿ ಪೊಲೀಸರು FIR ದಾಖಲಿಸಿದ್ದಾರೆ.