ದಕ್ಷಿಣಕನ್ನಡ : ಪೊಲೀಸ್ ಠಾಣೆಯ ಎದುರು ಬೆಂಬಲಿಗರ ಪರ ಧರಣಿ ಮಾಡಿದಲ್ಲದೆ, ಠಾಣೆಯ PSI ಗೆ ಧಮ್ಕಿ ಹಾಕಿದ ಆರೋಪದ ಹಿನ್ನೆಲೆಯಲ್ಲಿ ಇದೀಗ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಬಿಜೆಪಿ ಶಾಸಕ ಹರೀಶ್ ಪೂಂಜಾ ವಿರುದ್ಧ ಬೆಳ್ತಂಗಡಿ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ ಎಂದು ತಿಳಿದುಬಂದಿದೆ.
ಈ ಒಂದು ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ, ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ಕ್ಷೇತ್ರದ ಬಿಜೆಪಿ ಶಾಸಕ ಹರೀಶ್ ಪೂಂಜಾ ವಿರುದ್ಧ FIR ದಾಖಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ಠಾಣೆಯಲ್ಲಿ IPC ಸೆಕ್ಷನ್ 353, 504 ಅಡಿ ಇದೀಗ ಮೊಕದ್ದಮೆ ದಾಖಲಾಗಿದೆ ಎಂದು ತಿಳಿದು ಬಂದಿದೆ.
ತಮ್ಮ ಬೆಂಬಲಿಗರ ಪರ ಪೊಲೀಸ್ ಠಾಣೆ ಎದುರು ಧರಣಿ ಮಾಡಿದ್ದರು ಎನ್ನಲಾಗಿದೆ. ಪೊಲೀಸ್ ಠಾಣೆ ನಿಮ್ಮಪ್ಪಂದ ಅಂತ ಹರೀಶ್ ಪೂಂಜ ಧಮ್ಕಿ ಹಾಕಿದ್ದರು.ಬೆಳ್ತಂಗಡಿ ಠಾಣೆ ಪಿಎಸ್ಐ ಮುರುಳಿಧರ್ ಗೆ ಶಾಸಕ ಹರೀಶ್ ಪೂಂಜಾ ಬೆದರಿಕೆ ಹಾಕಿದ್ದರು ಎನ್ನಲಾಗಿದೆ.
ಶಾಸಕ ಹರೀಶ್ ಪೂಂಜ ಆಪ್ತರು ಅಕ್ರಮವಾಗಿ ಕಲ್ಲು ಗಣಿಗಾರಿಕೆ ನಡೆಸುತ್ತಿದ್ದರು. ಕಲ್ಲು ಕ್ವಾರಿ ಮೇಲೆ ತಹಶೀಲ್ದಾರ್ ನೇತೃತ್ವದಲ್ಲಿ ಪೊಲೀಸರ ತಂಡ ದಾಳಿ ನಡೆಸಿತ್ತು. ಬೆಳ್ತಂಗಡಿಯ ಮೇಲಂತಬೆಟ್ಟುವಿನಲ್ಲಿ ಕಲ್ಲು ಗಣಿಗಾರಿಕೆ ನಡೆಯುತ್ತಿತ್ತು.ಈ ಸಂಬಂಧ ಶಶಿರಾಜ್ ಶೆಟ್ಟಿ ಯನ್ನು ಬೆಳ್ತಂಗಡಿ ಪೊಲೀಸ್ರು ಬಂಧಿಸಿದ್ದರು.ಬಂಧಿತ ಯುವ ಮೋರ್ಚಾದ ತಾಲೂಕು ಅಧ್ಯಕ್ಷ ಹಾಗೂ ರೌಡಿಶೀಟರ್ ಶಶಿರಾಜ್ ಶೆಟ್ಟಿಯನ್ನು ಪೊಲೀಸರು ಬಂಧಿಸಿದ್ದರು.
ಈ ಹಿನ್ನೆಲೆಯಲ್ಲಿ ರಾತ್ರೋರಾತ್ರಿ ಪೊಲೀಸ್ ಠಾಣೆಯಲ್ಲಿ ಶಾಸಕ ಹಾಗೂ ಕಾರ್ಯಕರ್ತರು ಧರಣಿ ನಡೆಸಿದದ್ದರು. ಬಿಜೆಪಿ ಮುಖಂಡನನ್ನು ಬಂಧಿಸಿದ್ದಕ್ಕೆ ಹರೀಶ್ ಪೂಂಜ ಆಕ್ರೋಶ ವ್ಯಕ್ತಪಡಿಸಿದ್ದರು.ಅಕ್ರಮವಾಗಿ ಬಂದಿಸಿದ್ದಾರೆಂದು ಪಿಎಸ್ಐಗೆ ಶಾಸಕ ಭಾರಿಸ್ ಪೂಜ ಧಮ್ಕಿ ಹಾಕಿದ್ದರು ಹೀಗಾಗಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ವಿರುದ್ಧ ಇದೀಗ ಎಫ್ಐಆರ್ ದಾಖಲಾಗಿದೆ. ಕಲ್ಲು ಕ್ವಾರಿ ಮಾಲಿಕ ಪ್ರದೀಪ್ ಗಾಗಿ ಇದೀಗ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ ಎಂದು ತಿಳಿದು ಬಂದಿದೆ.