ಕಲಬುರ್ಗಿ : ಕಲಬುರ್ಗಿಯಲ್ಲಿ ಅಕ್ರಮವಾಗಿ ಪಡಿತರ ಅಕ್ಕಿ ಸಾಗಾಟ ಮಾಡುತಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಮುಖಂಡ ಮಣಿಕಂಠ ರಾಠೋಡ ಸೇರಿ ಮೂವರ ವಿರುದ್ದ ನಗರದ ಅಶೋಕ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ನಗರದ ಸಿದ್ಧಾರ್ಥ ನಗರದ ರಸ್ತೆಯಲ್ಲಿ ಸಾರ್ವಜನಿಕರು, ಆನಂದ ಚಲಾಯಿಸುತ್ತಿದ್ದ ವಾಹನವನ್ನು ತಡೆದು ಆಕ್ರೋಶ ವ್ಯಕ್ತಪಡಿಸಿದರು. ಮಣಿಕಂಠ ರಾಠೋಡ, ಚಾಲಕ ಆನಂದ ಹಾಗೂ ಪ್ರಭು ಕೆರೆಗಳ್ಳಿ ವಿರುದ್ಧ ಪ್ರಕರಣ ದಾಖಲಿಸಿಕೊಂಡ ಪೋಲಿಸರು, 57 ಸಾವಿರ ಮೌಲ್ಯದ 16 ಕ್ವಿಂಟಲ್ ಪಡಿತರ ಅಕ್ಕಿ ಹಾಗೂ ವಾಹನ ವಶಕ್ಕೆ ಪಡೆದಿದ್ದಾರೆ.
ಈ ವೇಳೆ ಚಾಲಕ ಮಣಿಕಂಠ ರಾಠೋಡ್ ಹೆಸರು ಹೇಳಿದ್ದ, ಪುಡ್ ಇನ್ಸ್ಪೆಕ್ಟರ್ ಯಲ್ಲಾಲಿಂಗ ಅವರು ನೀಡಿದ ದೂರಿನ ಅನ್ವಯ ಅಶೋಕ ನಗರ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈ ಹಿಂದೆಯೂ ಕೂಡ ಹಲವು ಪ್ರಕರಣಗಳಲ್ಲಿ ಬಿಜೆಪಿ ಮುಖಂಡ ಮಣಿಕಂಠ ರಾಠೋಡ್ ವಿರುದ್ಧ FIR ದಾಖಲಾಗಿತ್ತು.