ಬೆಂಗಳೂರು : ಕಾಂಗ್ರೆಸ್ ಶಾಸಕ ವೀರೇಂದ್ರ ಪಪ್ಪಿ ಕಾರು ಡಿಕ್ಕಿಯಾಗಿ ಇಬ್ಬರು ಓಂಶಕ್ತಿ ಮಾಲಾಧಾರಿಗಳು ಗಂಭೀರ ಗಾಯಗೊಂಡ ಘಟನೆ ನೆಲಮಂಗಲದ ಬೇಗೂರು ಗ್ರಾಮದ ಬಳಿಯ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಘಟನೆ ಸಂಭವಿಸಿದೆ.
ಇದೀಗ ಪ್ರಕರಣಕ್ಕೆ ಸಂಬಂಧಪಟ್ಟಂತೆ ನೆಲಮಂಗಲ ಸಂಚಾರಿ ಪೊಲೀಸ್ ಠಾಣೆಯಲ್ಲಿ FIR ದಾಖಲಾಗಿದೆ. ಚಾಲಕನ ನಿರ್ಲಕ್ಷ್ಯತನ ಹಾಗೂ ಅಜಾಗರೂಕತೆಯಿಂದ ಕಾರು ಚಾಲನೆ ಮಾಡಿದ ಆರೋಪದ ಅಡಿ ಇದೀಗ FIR ದಾಖಲಾಗಿದೆ. ಅಪಘಾತಕ್ಕೆ ಇಳದಂತಹ KA 55 P 0003 ನಂಬರ್ ಕಾರು ಡಿಕ್ಕಿ ಹೊಡೆದ ಪರಿಣಾಮ ಮಾಲಾಧಾರಿಗಳು ಗಂಭೀರವಾಗಿ ಗಾಯಗೊಂಡಿದ್ದಾರೆ.
ಘಟನೆ ಹಿನ್ನಲೆ
ಇಂದು ಬೆಳಿಗ್ಗೆ ಬೆಂಗಳೂರು ತುಮಕೂರು ಹೆದ್ದಾರಿಯಲ್ಲಿ ಶಾಸಕರು ಸಂಚರಿಸುತ್ತಿದ್ದ ಸಂದರ್ಭದಲ್ಲಿ ಈ ಘಟನೆ ನಡೆಸಿದೆ.ಮೂರು ಮಂದಿ ಮಾಲಾಧಾರಿಗಳಿಗೆ ಕಾರು ಡಿಕ್ಕಿ ಹೊಡೆದಿದ್ದು, ಇಬ್ಬರು ಮಾಲಾಧಾರಿಗೆ ಗಂಭೀರ ಹಾನಿಯಾಗಿದೆ ಎನ್ನಲಾಗಿದೆ. ಶಾಸಕರು ಅಪಾಯದಿಂದ ಪಾರಾಗಿದ್ದಾರೆ. ಗಾಯಾಳುಗಳನ್ನು ನೆಲಮಂಗಲ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.
ಶಾಸಕರು ಚಿತ್ರದುರ್ಗದಿಂದ ಬೆಂಗಳೂರಿಗೆ ಆಗಮಿಸುತ್ತಿದ್ದರು. ನೆಲಮಂಗಲ ಸಮೀಪ ಪಾದಯಾತ್ರೆ ಮೂಲಕ ಓಂ ಶಕ್ತಿ ಮಾಲಾಧಾರಿಗಳು ಸಾಗುತ್ತಿದ್ದರು. ಈ ವೇಳೆ ಅಪಘಾತ ನಡೆದಿದೆ. ಶಾಸಕರು ಆಸ್ಪತ್ರೆಗೆ ಭೇಟಿ ನೀಡಿ ಗಾಯಗಳುಗಳ ಆರೋಗ್ಯ ವಿಚಾರಿಸಿದ್ದಾರೆ. ಚಿಕಿತ್ಸೆಗೆ ಅಗತ್ಯ ಕ್ರಮಕೈಗೊಳ್ಳವುದಾಗಿ ತಿಳಿಸಿದ್ದಾರೆ ಎನ್ನಲಾಗಿದೆ.