ಬೆಳಗಾವಿ : ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಕಾರು ಅಪಘಾತ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಕಾರು ಚಾಲಕನ ವಿರುದ್ಧ ಕಿತ್ತೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಇಂದು ಬೆಳಿಗ್ಗೆ ನಸುಕಿನ ಜಾವ 6 ಗಂಟೆಯ ವೇಳೆ ಬೈಲಹೊಂಗಲದ ಬಳಿ ಕಾರು ಅಪಘಾತವಾಗಿದ್ದು, ಈ ಒಂದು ಅಪಘಾತದಲ್ಲಿ ಶ್ರೀ ಲಕ್ಷ್ಮಿ ಹೆಬ್ಬಾಳ್ಕರ್ ಅವರಿಗೆ ಗಂಭೀರವಾದಗಳಾಗಿದ್ದು ಬೆನ್ನು ಮೂಳೆ ಮುರಿತವಾಗಿದೆ ಎಂದು ಬೆಳಗಾವಿಯ ವಿಜಯ ಡಾ. ರವಿ ಪಾಟೀಲ್ ತಿಳಿಸಿದ್ದಾರೆ. ಘಟನೆಯಲ್ಲಿ ಸಹೋದರ ಜನರಾಜ ಹಟ್ಟಿಹಳಿ ಕಾರು ಚಾಲಕ ಹಾಗೂ ಗನ್ ಮ್ಯಾನ್ ಗೆ ಗಾಯಗಳಾಗಿವೆ.
ಈ ಹಿನ್ನೆಲೆಯಲ್ಲಿ ಇದೀಗ ಕಾರು ಚಾಲಕನ ವಿರುದ್ಧ ಕಿತ್ತೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, BNS ಕಾಯ್ದೆ ಅಡಿ 281, 125(A) 125(B) ಜೀವಕ್ಕೆ ಕುತ್ತು ತರುವ ನಿಷ್ಕಾಳಜಿ ವಾಹನ ಚಾಲನೆ ಹಾಗೂ ಆ ಜಾಗರೂಕತೆಯಿಂದ ವಾಹನ ಚಲಾಯಿಸಿದರ ಅಡಿ ಇದೀಗ ಪ್ರಕರಣ ದಾಖಲಾಗಿದೆ ಎಂದು ತಿಳಿದುಬಂದಿದೆ.