ಬೆಂಗಳೂರು : ಸಂಸತ್ತಿನ ವಿರೋಧ ಪಕ್ಷದ ನಾಯಕರಾಗಿರುವ ರಾಹುಲ್ ಗಾಂಧಿ ವಿರುದ್ಧ ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿ ಇದೀಗ ಬೆಂಗಳೂರಿನ ಹೈ ಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ಯತ್ನಾಳ್ ವಿರುದ್ಧ FIR ದಾಖಲಾಗಿದೆ.
ಹೌದು ಬಸನಗೌಡ ಪಾಟೀಲ್ ಯತ್ನಾಳ ವಿರುದ್ಧ ಇದೀಗ FIR ದಾಖಲಾಗಿದ್ದು, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮನೋಹರ್ ದೂರಿನ ಮೇರೆಗೆ FIR ದಾಖಲಾಗಿದೆ. ರಾಹುಲ್ ಗಾಂಧಿ ಜನನದ ಬಗ್ಗೆ ಶಾಸಕ ಯತ್ನಾಳ್ ಹೇಳಿಕೆ ನೀಡಿದ್ದರು. ಹಾಗಾಗಿ ಮನೋಹರ ಯತ್ನಾಳ್ ವಿರುದ್ಧ ದೂರು ಸಲ್ಲಿಸಿದ್ದಾರೆ.