ಬೆಂಗಳೂರು : ಇದೆ ಜನವರಿ 26ರಂದು ದೇಶದಲ್ಲೇಡೆ ಗಣರಾಜ್ಯೋತ್ಸವ ಆಚರಿಸುತ್ತಿದ್ದು ಈ ಸಂದರ್ಭದಲ್ಲಿ ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಪೋಟಿಸಿದಂತೆ ಬೆಂಗಳೂರಿನ ವಿವಿಧೆಡೆ, ಬಾಂಬ್ ಸ್ಪೋಟಿಸುವುದಾಗಿ ಅಪರಿಚಿತನ ಬೆದರಿಕೆ ಕರೆ ಬಂದಿದ್ದು, ಈ ಹಿನ್ನೆಲೆಯಲ್ಲಿ ಅಪಚಿತನ ವಿರುದ್ಧ ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಹೌದು ಗಣರಾಜೋತ್ಸವದ ಸಂದರ್ಭದಲ್ಲಿ ನಗರದ ವಿವಿಧೆಡೆ ಬಾಂಬ್ ಸ್ಫೋಟವಾಗಲಿದೆ ಎಂದು ಬೆಂಗಳೂರು ಪೊಲೀಸ್ ಕಂಟ್ರೋಲ್ ರೂಮ್ಗೆ ಅಪರಿಚಿತನೊಬ್ಬ ಕರೆ ಮಾಡಿದ್ದಾನೆ.ಜನವರಿ 9ರಂದು ಸಂಜೆ 5:30ರ ಸುಮಾರಿಗೆ ಬೆಂಗಳೂರು ಪೊಲೀಸ್ ಆಯುಕ್ತರ ಕಚೇರಿಯಲ್ಲಿರುವ ಕಂಟ್ರೊಲ್ ರೂಮ್ಗೆ ಕರೆ ಮಾಡಿದ್ದಾನೆ ಎಂದು ತಿಳಿದುಬಂದಿದೆ.
ಬೆಂಗಳೂರು ಪೊಲೀಸ್ ಆಯುಕ್ತರ ಕಚೇರಿಯಲ್ಲಿರುವ ಕಂಟ್ರೊಲ್ ರೂಮ್ಗೆ ಕರೆ ಮಾಡಿದ್ದ ಅಪರಿಚಿತ, 6 ಜನರ ಹೆಸರು ಹಾಗೂ ವಿಳಾಸಗಳನ್ನು ತಿಳಿಸಿ ರಾಮೇಶ್ವರಂ ಕೆಫೆಯಲ್ಲಿ ಈ ಹಿಂದೆ ಬಾಂಬ್ ಸ್ಫೋಟವಾದಂತೆ ಆರು ಜನರು ಗಣರಾಜ್ಯೋತ್ಸವದ ದಿನ ನಗರದ ವಿವಿಧೆಡೆ ಬಾಂಬ್ ಸ್ಫೋಟಿಸಲು ಉದ್ದೇಶಿಸಿದ್ದಾರೆ ಎಂದು ಹೇಳಿದ್ದಾನೆ. ಮೇಲ್ನೋಟಕ್ಕೆ ಇದೊಂದು ಹುಸಿ ಬೆದರಿಕೆ ಎಂದು ಕಂಡುಬಂದಿದ್ದು, ಪೊಲೀಸ್ ಕಂಟ್ರೋಲ್ ರೂಮ್ ಪಿಎಸ್ಐ ಓರ್ವರು ನೀಡಿರುವ ದೂರಿನನ್ವಯ ಅಪರಿಚಿತನ ವಿರುದ್ಧ ವಿಧಾನಸೌಧ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.