ಬೆಂಗಳೂರು : ನಿನ್ನೆ ಬೆಂಗಳೂರಲ್ಲಿ ಮೆಟ್ರೋ ಕಾಮಗಾರಿಯ ವಯಾಡೆಕ್ಟ್ ಕೆಳಗೆ ಬಿದಿದ್ದು, ಪರಿಣಾಮ ರಸ್ತೆಯಲ್ಲಿ ನಿಂತಿದ್ದ ಆಟೋ ಮೇಲೆ ಬಿದ್ದು, ಆಟೋ ಚಾಲಕ ಸಾವನಪ್ಪಿದ್ದ ಘಟನೆ ನಡೆದಿತ್ತು. ಇದೀಗ ಈ ಒಂದು ಪ್ರಕರಣಕ್ಕೆ ಸಂಬಂಧಪಟ್ಟಂತೆ ಯಲಹಂಕ ಸಂಚಾರ ಪೊಲೀಸ್ ಠಾಣೆಯಲ್ಲಿ ಮೂವರ ವಿರುದ್ಧ FIR ದಾಖಲಾಗಿದೆ.
ಯಲಹಂಕ ಸಂಚಾರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದ್ದು, ಲಾರಿ ಚಾಲಕ, NCC ಕಂಪನಿ ಮ್ಯಾನೇಜರ್ ಮತ್ತು ಗುತ್ತಿಗೆದಾರನ ವಿರುದ್ಧ FIR ದಾಖಲಾಗಿದೆ. BNS 281, 106 ಸೆಕ್ಷನ್ ಅಡಿಯಲ್ಲಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಬೆಂಗಳೂರಿನ ಯಲಹಂಕದ ಕೋಗಿಲು ಕ್ರಾಸ್ ಬಳಿ ಈ ಒಂದು ಘಟನೆ ನಡೆದಿತ್ತು. ಘಟನೆಯಲ್ಲಿ ಆಟೋ ಚಾಲಕ ಖಾಸಿಂಸಾಬ್ ಸ್ಥಳದಲ್ಲೇ ಮೃತಪಟ್ಟಿದ್ದ.
ಘಟನೆ ಹಿನ್ನೆಲೆ
ನಿನ್ನೆ ಮೆಟ್ರೋ ಕಾಮಗಾರಿ ಎಡವಟ್ಟಿಗೆ ಆಟೋ ಚಾಲಕ ಬಲಿಯಾಗಿರುವ ಘಟನೆ ಕೋಗಿಲು ಕ್ರಾಸ್ ಬಳಿ ನಡೆದಿತ್ತು. ಕಾಸಿಂ ಸಾಬ್ (35) ಮೃತ ದುರ್ದೈವಿಯಾಗಿದ್ದು, ರಾತ್ರಿ ಮೆಟ್ರೋ ಕಾಮಗಾರಿಗೆಂದು ಲಾರಿಯಲ್ಲಿ ವಯಾಡೆಕ್ಟ್ ತರಲಾಗುತಿತ್ತು. ವಯಾಡೆಕ್ಟ್ ಕೆಳಗೆ ಬಿದಿದ್ದು, ಪರಿಣಾಮ ರಸ್ತೆಯಲ್ಲಿ ನಿಂತಿದ್ದ ಆಟೋ ಮೇಲೆ ಬಿದ್ದು, ಆಟೋ ಚಾಲಕ ಸಾವನಪ್ಪಿದ್ದಾರೆ.
ತಡರಾತ್ರಿ ಏರ್‌ಪೋರ್ಟ್ ಮಾರ್ಗದ ಮೆಟ್ರೊ ಕಾಮಗಾರಿಗೆ ಬಳಸಲು ವಯಾಡಕ್ಟ್ ಕೊಂಡೊಯ್ಯುತ್ತಿದ್ದ ಲಾರಿ ತಿರುವು ಪಡೆಯುವಾಗ ಅವಘಡ ಸಂಭವಿಸಿದೆ. ಅವಘಡದ ಮುನ್ಸೂಚನೆ ಅರಿತ ಪ್ರಯಾಣಿಕ ತಕ್ಷಣ ಆಟೊದಿಂದ ಇಳಿದಿದ್ದಾರೆ. ಆದರೆ, ಖಾಸೀಂ ಸಾಬ್ ಇಳಿಯುವಷ್ಟರಲ್ಲಿ ವಯಾಡೆಕ್ಟ್ ಉರುಳಿದ ಪರಿಣಾಮ ಅವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಅವಘಡವನ್ನು ಕಂಡ ಜನ ಕೂಡಲೇ ರಕ್ಷಣೆಗೆ ಧಾವಿಸಿದ್ದರು. ಆದರೆ ಬೃಹದಾಕಾರದ ವಯಾಡಕ್ಟ್ ತೆರವುಗೊಳಿಸಲು ಕ್ರೇನ್ ಇರದ ಕಾರಣ ಪ್ರಯತ್ನ ವಿಫಲವಾಗಿದೆ. ಘಟನೆ ನಡೆದ ಎರಡು ಗಂಟೆಗಳ ಬಳಿ ಕ್ರೇನ್ ತರಿಸಿ ವಯಾಡಕ್ಟ್ ತೆರವುಗೊಳಿಸಿ ಮೃತದೇಹವನ್ನು ಹೊರ ತೆಗೆಯಲಾಗಿದೆ.