ಬೆಂಗಳೂರು : ಚುನಾವಣಾ ಬಾಂಡ್ ಗಳ ಮೂಲಕ ಸುಲಿಗೆ ಆರೋಪ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಬೆಂಗಳೂರಿನ ತಿಲಕ ನಗರ ಪೊಲೀಸ್ ಠಾಣೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಸೇರಿದಂತೆ ಹಲವರ ವಿರುದ್ಧ ಎಫ್ಐಆರ್ ದಾಖಲಾಗಿದೆ.
ಹೌದು ಚುನಾವಣಾ ಬಾಂಡ್ ಗಳ ಮೂಲಕ ಹಣ ಸುಲಿಗೆ ಮಾಡಿದ ಆರೋಪ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್, ಇಡಿ, ನಳಿನ್ ಕುಮಾರ್ ಕಟೀಲ್ ಹಾಗೂ ರಾಜ್ಯ ಬಿಜೆಪಿ ಅಧ್ಯಕ್ಷ ಬಿ ವೈ ವಿಜಯೇಂದ್ರ ಸೇರಿ ಹಲವರ ವಿರುದ್ಧ ಇದೀಗ ಎಫ್ಐಆರ್ ದಾಖಲಾಗಿದೆ. ಬೆಂಗಳೂರಿನ ತಿಲಕ ನಗರ ಪೊಲೀಸ್ ಠಾಣೆಯಲ್ಲಿ FIR ದಾಖಲಾಗಿದೆ. ಆದರ್ಶ ಅಯ್ಯರ್ ಎಂಬುವವರು ದೂರು ಆಧರಿಸಿ ಕೇಸ್ ದಾಖಲಿಸಲಾಗಿದೆ.
ದೂರಿನ ಪ್ರತಿ, ದಾಖಲೆಗಳನ್ನು ಠಾಣೆಗೆ ಕಳುಹಿಸಲು ನಿನ್ನೆ ಬೆಂಗಳೂರಿನ 42ನೇ ಎಸಿಎಂಎಂ ನ್ಯಾಯಾಲಯ ಸೂಚನೆ ನೀಡಿತ್ತು. ಬೆಂಗಳೂರಿನ ತಿಲಕ ನಗರ ಠಾಣೆಗೆ ಕಳುಹಿಸುವಂತೆ ಜಡ್ಜ್ ಸೂಚಿಸಿದ್ದರು. ಹಾಗಾಗಿ ಇದೀಗ ಚುನಾವಣಾ ಬಾಂಡ್ ಗಳ ಮೂಲಕ ಸುಲಿಗೆ ಆರೋಪ ಪ್ರಕರಣದಲ್ಲಿ ಕೇಂದ್ರ ಸಚಿವ ನಿರ್ಮಲ ಸೀತಾರಾಮನ್ ಸೇರಿದಂತೆ ಬಿವೈ ವಿಜಯೇಂದ್ರ ಹಾಗೂ ಇತರರ ವಿರುದ್ಧ FIR ದಾಖಲಾಗಿದೆ.