ಬೆಂಗಳೂರು: ರಾಜರಾಜೇಶ್ವರಿ ನಗರ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನ ಮೇಲೆ ಮೊಟ್ಟ ಎಸೆದ ಪ್ರಕರಣ ಸಂಬಂಧ ನಂದಿನಿ ಲೇಔಟ್ ಠಾಣೆಯಲ್ಲಿ ಎಫ್ ಐಆರ್ ದಾಖಲಾಗಿದೆ.
ಮೊಟ್ಟೆ ಎಸೆತ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಶಾಸಕ ಮುನಿರತ್ನ ದೂರು ಆಧರಿಸಿ ನಂದಿನಿ ಲೇಔಟ್ ಠಾಣೆಯಲ್ಲಿ ಪೊಲೀಸರು ಎಫ್ ಐಆರ್ ದಾಖಲಿಸಿದ್ದಾರೆ.
ನಿನ್ನೆ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಜನ್ಮದಿನದ ಕಾರ್ಯಕ್ರಮಕ್ಕೆ ಹೋಗುವಾಗ ಶಾಸಕ ಮುನಿರತ್ನ ಮೇಲೆ ಮೊಟ್ಟೆ ಎಸೆಯಲಾಗಿತ್ತು. ಬಳಿಕ ಅವರನ್ನು ಕೆ.ಸಿ. ಜನರಲ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದ್ದು, ಇಂದು ಆಸ್ಪತ್ರೆಯಿಂದ ಡಿಸ್ಜಚಾರ್ಜ್ ಆಗಿದ್ದಾರೆ.