ಬೆಂಗಳೂರು : ನಟ ಯಶ್ ಗೆ ಮತ್ತೊಂದು ಸಂಕಷ್ಟ ಎದುರಾಗಿದ್ದು, ಯಶ್ ಬರ್ತ್ ಡೇ ಬ್ಯಾನರ್ ಹಾಕಿದ್ದಕ್ಕೆ ಎಫ್ ಐಆರ್ ದಾಖಲಾಗಿದೆ.
ಹೌದು, ಬೆಂಗಳೂರಿನ ಯಶ್ ಮನೆ ಮುಂದೆ ಬ್ಯಾನರ್ ಹಾಕಿದ್ದಕ್ಕೆ ಬೆಂಗಳೂರಿನ ಹೈಗ್ರೌಂಡ್ ಪೊಲೀಸ್ ಠಾಣೆಯಲ್ಲಿ ಎಫ್ ಐಆರ್ ದಾಖಲಾಗಿದೆ.
ಬೆಂಗಳೂರಿನ ಗಾಲ್ಫ್ ಕ್ಲಬ್ ಮುಂದೆ ಇರುವ ನಟ ಯಶ್ ನಿವಾಸ ಎದುರು ಹುಟ್ಟುಹಬ್ಬದ ಶುಭಾಶಯ ಕೋರಿ ಬ್ಯಾನರ್ ಹಾಕಿದ್ದಕ್ಕೆ ವೇಣು ಕ್ರಿಯೇಶನ್ಸ್ ವಿರುದ್ಧ ಕೇಸ್ ದಾಖಲಾಗಿದೆ.
ಸಾರ್ವಜನಿಕರ ರಸ್ತೆಗೆ ಅಡ್ಡಲಾಗಿ, ನಗರದ ಸೌಂದರ್ಯವನ್ನು ಹಾಳು ಮಾಡುವಂತ ಬ್ಯಾನರ್ ಹಾಕುವಂತಿಲ್ಲ. ಆದರೆ ಯಶ್ ಬರ್ತ್ ಡೇ ಹಿನ್ನೆಲೆಯಲ್ಲಿ ವೇಣು ಕ್ರಿಯೇಶನ್ಸ್ ಹಲವು ಬ್ಯಾನರ್ ಗಳನ್ನು ಕಟ್ಟಿದ್ದು, ಜಿಬಿಎ ವಿಭಾಗದ ಪೂಜಾರಪ್ಪ ಎಂಬುವರು ಹೈಗ್ರೌಂಡ್ ಪೊಲೀಸ್ ಠಾಣೆಗೆ ದೂರು ಸಲ್ಲಿಸಿದ್ದು, ದೂರಿನನ್ವಯ ಪ್ರಕರಣ ದಾಖಲಾಗಿದೆ.
ನಟ ಯಶ್ ನಟನೆಯ ಟಾಕ್ಸಿಕ್ ವಿರುದ್ಧ ಮಕ್ಕಳಹಕ್ಕುಗಳ ಆಯೋಗಕ್ಕೆ ದೂರು ಸಲ್ಲಿಕೆ
ರಾಕಿಂಗ್ ಸ್ಟಾರ್ ಯಶ್ ನಟನೆಯ ಟಾಕ್ಸಿಕ್ ಚಿತ್ರಕ್ಕೆ ಮತ್ತೊಂದು ಸಂಕಷ್ಟ ಎದುರಾಗಿದ್ದು, ಸಿನಿಮಾ ವಿರುದ್ಧ ಮಕ್ಕಳ ಹಕ್ಕುಗಳ ಆಯೋಗಕ್ಕೆ ದೂರು ಸಲ್ಲಿಸಲಾಗಿದೆ.
ನಟ ಯಶ್ ಅಭಿನಯದ ಟ್ಯಾಕ್ಸಿಕ್ ಚಿತ್ರದ ಟ್ರೇಲರ್ ರಿಲೀಸ್ ಆಗಿತ್ತು. ಈ ಟೀಸರ್ ನಲ್ಲಿ ಅಶ್ಲೀಲ ಕಂಟೆಂಟ್ ಇದೆ, ಮಕ್ಕಳ ಸ್ವಾಸ್ಥಕ್ಕೆ ಧಕ್ಕೆ ಉಂಟು ಮಾಡುತ್ತಿದೆ ಎಂದು ಹೈಕೋರ್ಟ್ ವಕೀಲ ಲೋಹಿತ್ ಹನುಮಾಪುರ ದೂರು ಸಲ್ಲಿಸಿದ್ದಾರೆ. ವಕೀಲಯ ದೂರು ಸ್ವೀಕರಿಸಿರುವ ಮಕ್ಕಳ ಹಕ್ಕುಗಳ ಆಯೋಗವು ಕ್ರಮ ಕೈಗೊಳ್ಳುವುದಾಗಿ ತಿಳಿಸಿದೆ ಎನ್ನಲಾಗಿದೆ.








