ಹಾವೇರಿ : ಹಾವೇರಿಯಲ್ಲಿ ಭೀಕರವಾದ ಅಗ್ನಿ ಅವಘಡ ಸಂಭವಿಸಿದ್ದು ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕು ಆಸ್ಪತ್ರೆಯಲ್ಲಿ ಶಾರ್ಟ್ ಸರ್ಕ್ಯೂಟ್ ಇಂದ ಅಗ್ನಿ ಅವಘಡ ಸಂಭವಿಸಿದೆ. ಆಸ್ಪತ್ರೆಯ ಎರಡನೇ ಮಹಡಿಯಲ್ಲಿ ಪಿಂಕಿ ಅನಾಹುತ ಸಂಭವಿಸಿದೆ.
ಘಟನೆಯಲ್ಲಿ ಒಂದು ಕೋಟಿ ಮೌಲ್ಯದ ಔಷಧ ಮತ್ತು ವೈದ್ಯಕೀಯ ಉಪಕರಣಗಳು ಬೆಂಕಿಗೆ ಆಹುತಿಯಾಗಿವೆ. ಆದರೆ ಅದೃಷ್ಟವಶಾತ್ ಯಾವುದೇ ರೋಗಿಗಳಿಗೆ ತೊಂದರೆ ಆಗಿಲ್ಲ ಸ್ಥಳಕ್ಕೆ ಅಗ್ನಿಶಾಮಕ ದಳ ಸಿಬ್ಬಂದಿಗಳು ಬಂದು ಬೆಂಕಿ ನಂದಿಸುವಲ್ಲಿ ಯಶಸ್ವಿ ಆಗಿದ್ದಾರೆ. ಹಾನಗಲ್ ಪೊಲೀಸ್ ಠಾಣೆಯಲ್ಲಿ ಘಟನೆ ಕುರಿತಂತೆ ಪ್ರಕರಣ ದಾಖಲಾಗಿದೆ.








