ಮಧ್ಯಪ್ರದೇಶ: ತಿರುವನಂತಪುರಂನಿಂದ ಹಜರತ್ ನಿಜಾಮುದ್ದೀನ್ಗೆ ಚಲಿಸುತ್ತಿದ್ದ ರಾಜಧಾನಿ ಎಕ್ಸ್ಪ್ರೆಸ್ ರೈಲಿನಲ್ಲಿ ಭಾನುವಾರ ಅಗ್ನಿ ಅವಘಡ ಸಂಭವಿಸಿದೆ. ರೈಲು ಸಂಖ್ಯೆ 12431ರ ಬಿ-1 (B-1) ಕೋಚ್ನಲ್ಲಿ ಈ ಬೆಂಕಿ ಕಾಣಿಸಿಕೊಂಡಿದೆ ಎಂದು ಪಶ್ಚಿಮ ಮಧ್ಯ ರೈಲ್ವೆ ಪ್ರಕಟಣೆಯಲ್ಲಿ ತಿಳಿಸಿದೆ.
ಮಧ್ಯಪ್ರದೇಶದ ಲುನಿ ರಿಚ್ಚಾ ಮತ್ತು ವಿಕ್ರಮಗಢ ಆಲೋಟ್ ನಿಲ್ದಾಣಗಳ ನಡುವೆ ರೈಲು ಚಲಿಸುತ್ತಿದ್ದಾಗ ಈ ಘಟನೆ ನಡೆದಿದೆ. ಅದೃಷ್ಟವಶಾತ್, ಬೆಂಕಿ ಕಾಣಿಸಿಕೊಂಡ ತಕ್ಷಣವೇ ಎಚ್ಚೆತ್ತ ರೈಲ್ವೆ ಸಿಬ್ಬಂದಿ, ತೊಂದರೆಗೊಳಗಾದ ಕೋಚ್ನಲ್ಲಿದ್ದ ಎಲ್ಲಾ ಪ್ರಯಾಣಿಕರನ್ನು ತಕ್ಷಣವೇ ಸುರಕ್ಷಿತವಾಗಿ ಕೆಳಗೆ ಇಳಿಸಿದ್ದಾರೆ. ಘಟನೆಯಲ್ಲಿ ಯಾರಿಗೂ ಯಾವುದೇ ರೀತಿಯ ಗಾಯಗಳಾಗಿಲ್ಲ ಹಾಗೂ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎಂದು ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.
A fire was reported in B-1 coach (near SLR end) of Train No. 12431 Thiruvananthapuram–Hazrat Nizamuddin Rajdhani Express between Luni Richha (LNR) and Vikramgarh Alot (VMA) at Km 729/02 (Loco) & 728/14-16 (SLR) in Down direction. All passengers of the affected coach were safely… pic.twitter.com/uOJXP5xqUj
— ANI (@ANI) May 17, 2026







