ಭೂಪಾಲ್: ಮಧ್ಯಪ್ರದೇಶದ ಉಜ್ಜಯಿನಿಯಲ್ಲಿರುವ ಮಹಾಕಾಲೇಶ್ವರ ದೇವಸ್ಥಾನದಲ್ಲಿ ಭಾರಿ ಬೆಂಕಿ ಅವಘಡ ಸಂಭವಿಸಿದೆ. ಬೆಂಕಿ ನಂದಿಸಲು ಅಗ್ನಿಶಾಮಕ ಕಾರ್ಯಾಚರಣೆ ನಡೆಯುತ್ತಿದೆ.
ದೇವಾಲಯದ ಆವರಣದಲ್ಲಿರುವ ‘ಶಂಖ ದ್ವಾರ’ ಬಳಿ ಸೌರ ಫಲಕದ ಬ್ಯಾಟರಿಯಲ್ಲಿ ಸ್ಫೋಟ ಸಂಭವಿಸಿದ ನಂತರ ಬೆಂಕಿ ಕಾಣಿಸಿಕೊಂಡಿದೆ. ಘಟನೆಯಲ್ಲಿ ಯಾವುದೇ ಸಾವುನೋವುಗಳ ಬಗ್ಗೆ ವರದಿಯಾಗಿಲ್ಲ. ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗಿದೆ