ಕೊಪ್ಪಳ : ಮನೆಯಲ್ಲಿ ಸಿಲಿಂಡರ್ ಸೋರಿಕೆಯಾಗಿ ಮನೆ ಸಂಪೂರ್ಣವಾಗಿ ಬೆಂಕಿಗೆ ಅಹುತಿಯಾಗಿ ಹೊತ್ತಿ ಉರಿದಿರುವ ಘಟನೆ ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲೂಕಿನ ತೋಪಲಕಟ್ಟಿ ಎಂಬ ಗ್ರಾಮದಲ್ಲಿ ಈ ಅಗ್ನಿ ಅವಘಡ ಸಂಭವಿಸಿದೆ ಆದರೆ ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.
ಸಿಲಿಂಡರ್ ಸೋರಿಕೆಯಿಂದ ಮನೆಯಲ್ಲಿ ಅಗ್ನಿವಘಡ ಸಂಭವಿಸಿದ್ದು, ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲೂಕಿನ ತೋಪಲಕಟ್ಟಿ ಗ್ರಾಮದಲ್ಲಿ ಮುತ್ತಪ್ಪ ಕುಮಾರ್ ಎನ್ನುವವರ ಮನೆಯಲ್ಲಿ ಈ ಸಿಲಿಂಡರ್ ಸೋರಿಕೆಯ ಈ ಘಟನೆ ನಡೆದಿದೆ. ಆದರೆ ಯಾವುದೇ ರೀತಿಯಾದ ಪ್ರಾಣಾಪಾಯ ಸಂಭವಿಸಿಲ್ಲವಾದ್ದರಿಂದ ಭಾರಿ ಅನಾಹುತ ಒಂದು ತಪ್ಪಿದೆ.
ಘಟನೆ ನಡೆದ ಕೂಡಲೇ ಮನೆಯಿಂದ ನಿವಾಸಿಗಳು ಹೊರಗೆ ಓಡಿ ಬಂದಿದ್ದಾರೆ. ಸಿಲಿಂಡರ್ ಗೆ ಹೊತ್ತಿದ್ದ ಬೆಂಕಿಯನ್ನು ಅಗ್ನಿಶಾಮಕ ದಳ ಸಿಬ್ಬಂದಿ ನಂದಿಸಿದೆ.ಸಿಲಿಂಡರ್ ಸ್ಫೋಟವಾಗದಂತೆ ಸಿಬ್ಬಂದಿ ಜಾಗೃತಿ ವಹಿಸಿದ್ದರು ಬೆಂಕಿ ಹೊತ್ತುತ್ತಿದ್ದಂತೆ ನಿವಾಸಿಗಳು ಹೊರಗಡೆ ಓಡಿ ಬಂದಿದ್ದಾರೆ ಹೊರಗೆ ಓಡಿಬಂದು ಮನೆಯವರು ಪ್ರಾಣ ಉಳಿಸಿಕೊಂಡಿದ್ದಾರೆ. ಘಟನೆ ಕುರಿತಂತೆ ಕುಷ್ಟಗಿ ತಾಲೂಕಿನಲ್ಲಿ ಪ್ರಕರಣ ದಾಖಲಾಗಿದೆ.