ಬೀದರ್ : ಬೀದರ್ ನಲ್ಲಿ ಇಂದು ಭೀಕರ ಘಟನೆಯೊಂದು ಸಂಭವಿಸಿದ್ದು, ಚಲಿಸುತ್ತಿದ್ದ ಸರ್ಕಾರಿ ಬಸ್ ಗೆ ಏಕಾಏಕಿ ಹೊತ್ತಿ ಉರಿದಿದೆ.
ಬೀದರ್ ಜಿಲ್ಲೆಯ ಔರಾದ್ ತಾಲೂಕಿನ ಕಪ್ಪಿಕೇರಿ ಬಳಿ ಚಲಿಸುತ್ತಿದ್ದ ಸರ್ಕಾರಿ ಬಸ್ ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದೆ. ಕೂಡಲೇ ಚಾಲಕನ ಸಮಯಪ್ರಜ್ಞೆಯಿಂದ ಭಾರಿ ಅನಾಹುತ ತಪ್ಪಿದಂತಾಗಿದೆ.
ಬಸ್ ಎಂಜಿನ್ ನಲ್ಲಿ ಬೆಂಕಿಕಾಣಿಸಿಕೊಳ್ಳುತ್ತಿದ್ದ ಬಸ್ ನಿಲ್ಲಿಸಿದ ಚಾಲಕ ಕೂಡಲೇ ಪ್ರಯಾಣಿಕರನ್ನು ಇಳಿಯುವಂತೆ ಹೇಳಿದ್ದಾರೆ. ಹೀಗಾಗಿ 25 ಪ್ರಯಾಣಿಕರು ಬಸ್ ನಿಂದ ಕೆಳಗಿಳಿದು ಪ್ರಾಣ ಉಳಿಸಿಕೊಂಡಿದ್ದಾರೆ. ಸದ್ಯ ಬೆಂಕಿ ಸುಟ್ಟು ಕರಕಲಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ.