ಮಧ್ಯಪ್ರದೇಶದ ಉಜ್ಜಯಿನಿಯಲ್ಲಿ ಭಸ್ಮ ಆರತಿ ಸಂದರ್ಭದಲ್ಲಿ ಮಹಾಕಾಲ್ ದೇವಾಲಯದ ಗರ್ಭಗುಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದೆ. 13 ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಅವರನ್ನು ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ.
ಘಟನೆಯ ಸಮಯದಲ್ಲಿ ಹೋಳಿ ಆಚರಣೆ ನಡೆಯುತ್ತಿತ್ತು. ಗರ್ಭಗುಡಿಯಲ್ಲಿ ಭಸ್ಮ ಆರತಿ ಸಮಯದಲ್ಲಿ ಬೆಂಕಿ ಕಾಣಿಸಿಕೊಂಡಿದೆ ಎಂದು ಜಿಲ್ಲಾಧಿಕಾರಿ ನೀರಜ್ ಕುಮಾರ್ ಸಿಂಗ್ ತಿಳಿಸಿದ್ದಾರೆ. ಘಟನೆಯಲ್ಲಿ 13 ಮಂದಿ ಗಾಯಗೊಂಡಿದ್ದಾರೆ. ಅವರು ಚಿಕಿತ್ಸೆ ಪಡೆಯುತ್ತಿದ್ದಾರೆ.
#WATCH | District Collector Neeraj Kumar Singh says, "The fire broke out during bhasma aarti in the 'garbhagriha'. 13 people are injured in the incident…Their medical treatment is underway." https://t.co/2nj4utsepn pic.twitter.com/BxCtq89Wd8
— ANI (@ANI) March 25, 2024