ಚಿತ್ರದುರ್ಗ : ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ನಾಯಕನಹಟ್ಟಿ ಗ್ರಾಮದಲ್ಲಿ ಭೀಕರ ಅಗ್ನಿ ಅವಘಡ ಸಂಭವಿಸಿದ್ದು, ನಾಯಕನಹಟ್ಟಿ ರಥೋತ್ಸವದ ವೇಳೆ ಸ್ವೀಟ್ ಕಾರ್ನ್ ಗಾಡಿಗೆ ಏಕಾಏಕಿ ಬೆಂಕಿ ತಗುಲಿ ಕೆಲಕಾಲ ಆತಂಕ ಸೃಷ್ಟಿಯಾಗಿತ್ತು. ಆದರೆ ಸ್ಥಳೀಯ ಸೇವಾ ಕಾರ್ಯಕರ್ತರ ಸಭೆ ಪ್ರಜ್ಞೆಯಿಂದ ಭಾರಿ ಅನಾಹುತ ಒಂದು ತಪ್ಪಿದೆ.
ಹೌದು ಸ್ವೀಟ್ ಕಾರ್ನ್ ಗಾಡಿಗೆ ಏಕಾಏಕಿ ಬೆಂಕಿ ಹೊತ್ತಿಕೊಂಡಿದೆ. ನಾಯಕನಹಟ್ಟಿ ರಥೋತ್ಸವದ ವೇಳೆ ಈ ದುರಂತ ಸಂಭವಿಸಿದೆ. ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ನಾಯಕನಹಟ್ಟಿಯಲ್ಲಿ ಸ್ವೀಟ್ ಕಾರ್ನ್ ಗಾಡಿಗೆ ಏಕಾಏಕಿ ಬೆಂಕಿ ಹೊತ್ತಿಕೊಂಡಿದೆ. ಈ ವೇಳೆ ಜಾತ್ರೆಗೆಂದು ಸೇರಿದ ಭಕ್ತರು ದಿಕ್ಕಾಪಾಲಾಗಿ ಓಡಿ ಹೋಗಿ ಪ್ರಣ ಉಳಿಸಿಕೊಂಡಿದ್ದಾರೆ.
ಈ ವೇಳೆ ಜಾತ್ರೆಯಲ್ಲಿನ ಸೇವಾ ಕಾರ್ಯಕರ್ತರು ತಕ್ಷಣ ಕಾರ್ಯ ಪ್ರವೃತ್ತರಾಗಿ ಸ್ವೀಟ್ ಕಾರ್ನ್ ಗಾಡಿಗೆ ಹೊತ್ತಿಕೊಂಡಿದ್ದ ಬೆಂಕಿ ನಂದಿಸಿದ್ದಾರೆ. ಸೇವಾ ಕಾರ್ಯಕರ್ತರ ಸಮಯ ಪ್ರಜ್ಞೆಯಿಂದ ಭಾರಿ ಅನಾಹುತವೊಂದು ತಪ್ಪಿದೆ. ಘಟನೆ ಕುರಿತು ನಾಯಕನಹಟ್ಟಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.