ಬೆಂಗಳೂರು : ರಾಜಧಾನಿ ಬೆಂಗಳೂರಿನಲ್ಲಿ ಮತ್ತೊಂದು ಅಗ್ನಿ ಅವಘಡ ಘಟನೆ ಜರುಗಿದ್ದು ಬೆಂಗಳೂರಿನ ರಾಜಾಜಿನಗರ ಮೆಟ್ರೋ ನಿಲ್ದಾಣ ಬಳಿ ಅಗ್ನಿ ಅವಘಡ ಸಂಭವಿಸಿದ್ದು ಮೆಟ್ರೋ ನಿಲ್ದಾಣದ ಬಳಿ ನಿಂತಿದ್ದ ನಾಲ್ಕು ಬೈಕ್ ಗಳಿಗೆ ಬೆಂಕಿಗೆ ಅಹುತಿಯಾಗಿರುವ ಘಟನೆ ನಡೆದಿದೆ.
ಮೆಟ್ರೋ ನಿಲ್ದಾಣ ಬಳಿ ಆಕಸ್ಮಿಕವಾಗಿ ಅಗ್ನಿ ಅವಘಡ ಸಂಭವಿಸಿದ್ದರಿಂದ ತಕ್ಷಣ ಘಟನಾ ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸಿತು. ಘಟನೆ ಕುರಿತಂತೆ ರಾಜಾಜಿನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
ಇತ್ತೀಚಿಗೆ ರಾಜಧಾನಿ ಬೆಂಗಳೂರಿನಲ್ಲಿ ಅಗ್ನಿ ಅವಘಡಗಳ ಪ್ರಕರಣಗಳು ಹೆಚ್ಚುತ್ತಿವೆ. ಈ ಅಗ್ನಿ ಅವಘಡಗಳಿಗೆ ಬೇಜವಾಬ್ದಾರಿತನ ಹಾಗೂ ಆಕಸ್ಮಿಕವಾಗಿ ಇಂತಹ ಅಗ್ನಿಯ ಅವಘಡಗಳು ಆಗಾಗ ಸಂಭವಿಸುತ್ತವೆ. ಇಷ್ಟಿದ್ದರೂ ಕೂಡ ಕೆಲವು ಕಡೆಗಳಲ್ಲಿ ಮತ್ತೆ ಅದೇ ಬೇಜವಾಬ್ದಾರಿತನ ಮುಂದುವರೆದಿದ್ದು ಅಗ್ನಿ ಅವಘಡಗಳ ಪ್ರಕರಣಗಳು ಹೆಚ್ಚುತ್ತಿವೆ.