ತುಮಕೂರು : ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ನ ಇಂಜಿನ್ನಲ್ಲಿ ಬೆಂಕಿ ಕಾಣಿಸಿಕೊಂಡಿರುವ ಘಟನೆ ತುಮಕೂರು ಜಿಲ್ಲೆ ಚಿಕ್ಕನಾಯಕನಹಳ್ಳಿ ತಾಲೂಕಿನ ಹುಳಿಯಾರು ಬಳಿ ನಡೆದಿದೆ. ಹುಳಿಯಾರಿನಿಂದ ಅರಸೀಕೆರೆಗೆ ತೆರಳುತ್ತಿದ್ದ ಬಸ್ನಲ್ಲಿ ಬೆಂಕಿ ಕಾಣಿಸಿಕೊಂಡ ಕೂಡಲೇ ಪ್ರಯಾಣಿಕರನ್ನು ಕೆಳೆಗೆ ಇಳಿಸಲಾಗಿದ್ದು, ಡೀಸೆಲ್ ಸೋರಿಕೆಯಾಗಿ ಬೆಂಕಿ ಕಾಣಿಸಿಕೊಂಡಿರುವ ಅನುಮಾನ ವ್ಯಕ್ತವಾಗಿದೆ.
ಕೂಡಲೇ ಎಚ್ಚೆತ್ತ ಸ್ಥಳೀಯರು ತಕ್ಷಣ ನೀರು ಹಾಕಿ ಬೆಂಕಿ ನಂದಿಸುವ ಕೆಲಸ ಮಾಡಿದ್ದಾರೆ. ಇದರಿಂದ ಹೆಚ್ಚಿನ ಅನಾಹುತ ತಪ್ಪಿದ್ದು, ಹುಳಿಯಾರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಘಟನಾ ಸ್ಥಳಕ್ಕೆ ಅಗ್ನಿ ಶಾಮಕ ದಳ ಸಿಬ್ಬಂದಿಗಳು ಸಹ ಬಂದು ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದು ಯಾವುದೇ ರೀತಿ ಪ್ರಾಣ ಹಾನಿ ಸಂಭವಿಸಿಲ್ಲ.








