ಬಳ್ಳಾರಿ : ಬಳ್ಳಾರಿಯಲ್ಲಿ ಹಂಪಿ ಎಕ್ಸ್ಪ್ರೆಸ್ ರೈಲಿನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದೆ. ಬಳ್ಳಾರಿಯಿಂದ ಬೆಂಗಳೂರು ಕಡೆಗೆ ಈ ಒಂದು ಹಂಪಿ ಎಕ್ಸ್ಪ್ರೆಸ್ ರೈಲು ಸಂಚರಿಸುತ್ತಿತ್ತು.
ಬಳ್ಳಾರಿ ಗಡಿಭಾಗದ ಹಗರಿ ಗ್ರಾಮದ ಬಳಿ ಈ ಒಂದು ಘಟನೆ ನಡೆದಿದೆ ಅದೃಷ್ಟವಶತ್ ಘಟನೆಯಲ್ಲಿ ಯಾವುದೇ ರೀತಿ ಪ್ರಾಣಪಾಯ ಸಂಭವಿಸಿಲ್ಲ. ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಕಾಣಿಸಿಕೊಂಡಿರುವ ಶಂಕೆ ವ್ಯಕ್ತವಾಗುತ್ತಿದೆ. ಈ ಕುರಿತು ಇನ್ನಷ್ಟು ಮಾಹಿತಿ ನಿರೀಕ್ಷಿಸಲಾಗುತ್ತಿದೆ.








