ಬೆಂಗಳೂರು: ನಗರದಲ್ಲಿ ದೀಪಾವಳಿ ವೇಳೆ ಪಟಾಕಿ ಸಿಡಿತದಿಂದ ಅವಘಡ ಸಂಭವಿಸಿದೆ. ಪಟಾಕಿ ಸಿಡಿದು ಮಕ್ಕಳು ಸೇರಿದಂತೆ ಒಟ್ಟು 100 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ.
ದೀಪಾವಳಿ ಆಚರಣೆ ವೇಳೆ ಪಟಾಕಿ ಸಿಡಿದು ಬೆಂಗಳೂರಿನಲ್ಲೇ 100ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಒಟ್ಟಾರೆ ಕಳೆದ ಎರಡು ದಿನಗಳಲ್ಲಿ ನೂರಕ್ಕೂ ಅಧಿಕ ಮಂದಿ ನಗರದ ವಿವಿಧ ಕಣ್ಣಿನ ಆಸ್ಪತ್ರೆಗಳಿಗೆ ದಾಖಲಾಗಿದ್ದಾರೆ.
ಮಂಗಳವಾರ ಮಿಂಟೊ ಆಸ್ಪತ್ರೆಗೆ 13 ಮಂದಿ ದಾಖಲಾಗಿದ್ದು, ಈ ಪೈಕಿ 6 ಮಕ್ಕಳಿದ್ದಾರೆ. ಇಬ್ಬರು ಒಳರೋಗಿಗಳಾಗಿ ದಾಖಲಾಗಿದ್ದಾರೆ. ನಾರಾಯಣ ನೇತ್ರಾಲಯದಲ್ಲಿ 27 ಮಕ್ಕಳು ಸೇರಿ 46 ಮಂದಿ ಚಿಕಿತ್ಸೆ ಪಡೆದುಕೊಂಡಿದ್ದಾರೆ. ಶಂಕರ ಆಸ್ಪತ್ರೆಯಲ್ಲಿ 13, ಅಗರ್‌ವಾಲ್ ಆಸ್ಪತ್ರೆಗೆ ಮೂವರು ದಾಖಲಾಗಿದ್ದಾರೆ ಎಂದು ವರದಿಯಾಗಿದೆ.