ಪಾಟ್ನಾ : ಬಿಹಾರದ ನವಗಟಿಯಾದಲ್ಲಿ ಕೇಂದ್ರ ಸಚಿವ ನಿತ್ಯಾನಂದ ರೈ ಸೋದರಳಿಯರ ನಡುವೆ ಗುಂಡಿನ ಕಾಳಗ ನಡೆದಿದ್ದು, ಗುಂಡೇಟಿಗೆ ಓರ್ವ ಸಾವನ್ನಪ್ಪಿರುವ ಘಟನೆ ನಡೆದಿದೆ.
ನಿತ್ಯಾನಂದ ರೈ ಕೇಂದ್ರ ಗೃಹ ಖಾತೆ ರಾಜ್ಯ ಸಚಿವರಾಗಿದ್ದು, ಅವರ ಸಹೋದರಿಯರಾದ ವಿಶ್ವಜಿತ್ ಹಾಗೂ ಜೈಜಿತ್ ನಡುವೆ ಗಲಾಟೆ ನಡೆದು ಪರಸ್ಪರ ಗುಂಡಿನ ದಾಳಿ ನಡೆಸಿದ್ದಾರೆ. ಈ ವೇಳೆ ಗುಂಡಿನ ದಾಳಿಯಲ್ಲಿ ಸಚಿವರ ಓರ್ವ ಸೋದರಳಿಯ ಸಾವನ್ನಪ್ಪಿದ್ದಾರೆ ಎಂದು ತಿಳಿಬಂದಿದೆ.
ಕುಡಿಯುವ ನೀರಿನ ವಿಷಯಕ್ಕೆ ಸಂಬಂಧಿಸಿದಂತೆ ನಡೆದ ಜಗಳ ಗುಂಡಿನ ದಾಳಿಗೆ ಕಾರಣವಾಗಿದೆ ಎಂದು ತಿಳಿದುಬಂದಿದೆ. ಘಟನಾ ಸ್ಥಳಕ್ಕೆ ಪೊಲೀಸರು ಆಗಮಿಸಿದ್ದು, ಪರಿಶೀಲನೆ ನಡೆಸಿದ್ದಾರೆ.