ಬಳ್ಳಾರಿ : ಬ್ಯಾನರ್ ಕಟ್ಟುವ ವಿಚಾರದಲ್ಲಿ ಶಾಸಕ ಭರತ್ ರೆಡ್ಡಿ ಮತ್ತು ಜನಾರ್ದನ ರೆಡ್ಡಿ ಬೆಂಬಲಿಗರ ನಡುವಿನ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಭರತ್ ರೆಡ್ಡಿ ಸೇರಿ 22 ಜನರ ವಿರುದ್ಧ ದೂರು ದಾಖಲಾಗಿದೆ.
ಮಾಜಿ ಸಚಿವ ಜನಾರ್ದನ ರೆಡ್ಡಿ ಮನೆಗೆ ಅತಿಕ್ರಮ ಪ್ರವೇಶ, ಜಾತಿನಿಂದನೆ, ಹಲ್ಲೆಗೆ ಯತ್ನ ಆರೋಪದಡಿ ಬ್ರೂಸ್ ಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಶಾಸಕ ಭರತ್ ರೆಡ್ಡಿ ಅವರ ಆಪ್ತರಾದ ಸತೀಶ್ ರೆಡ್ಡಿ, ಚಾನಾಳ ಶೇಖರ್, ಲೋಕೇಶ್ ಅವಂಬಾವಿ, ಗಂಗಾಧರ ಸೇರಿ 22 ಜನರ ವಿರುದ್ದ ಪ್ರಕರಣ ದಾಖಲಾಗಿದೆ.
ನಿನ್ನೆ ಭರತ್ ರೆಡ್ಡಿ ಅವರ ಬೆಂಬಲಿಗ ಚಾನಾಳ ಶೇಖರ್ ಅವರು ಜನಾರ್ದನ್ ರೆಡ್ಡಿ, ಶ್ರೀರಾಮುಲು ಸೇರಿದಂತೆ 11 ಜನರ ವಿರುದ್ಧ ದೂರು ನೀಡಿದ್ದರು. ಇಂದು ಜನಾರ್ದನ ರೆಡ್ಡಿ ಅವರ ಬೆಂಬಲಿಗ ಮನೆಗೆಲಸದ ವ್ಯಕ್ತಿ ನಾಗರಾಜ್ ಅವರು ಬ್ರೂಸ್ ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರತಿದೂರು ದಾಖಲಿಸಿದ್ದಾರೆ.








