ಬಳ್ಳಾರಿ : ಕಳೆದ ಎರಡು ದಿನಗಳ ಹಿಂದೆ ಬಳ್ಳಾರಿಯಲ್ಲಿ ಬ್ಯಾನರ್ ಕಟ್ಟುವ ವಿಚಾರಕ್ಕೆ ಸಂಬಂಧಪಟ್ಟಂತೆ ಗಲಾಟೆ ನಡೆದು ಫೈರಿಂಗ್ ಆಗಿ ಕಾಂಗ್ರೆಸ್ ಕಾರ್ಯಕರ್ತ ಸಾವನ್ನಪ್ಪಿರುವ ಘಟನೆ ನಡೆದಿತ್ತು. ಈ ಒಂದು ಘಟನೆಗೆ ಸಂಬಂಧಿಸಿದಂತೆ ಬಳ್ಳಾರಿಯ ಬ್ರೂಸ್ ಪೇಟೆ ಪೊಲೀಸ್ ಠಾಣೆಯಲ್ಲಿ ಬಿಜೆಪಿ ಶಾಸಕ ಜನಾರ್ಧನ ರೆಡ್ಡಿ ಸೇರಿದಂತೆ ನಾಲ್ವರ ವಿರುದ್ಧ ಸುಮೋಟೋ ಪ್ರಕರಣ ದಾಖಲಾಗಿದೆ.
ಹೌದು ಬಳ್ಳಾರಿಯಲ್ಲಿ ಬ್ಯಾನರ್ ಗಲಾಟೆಗೆ ಕಾಂಗ್ರೆಸ್ ಕಾರ್ಯಕರ್ತ ಬಲಿಯಾಗಿದ್ದ ಈ ವಿಚಾರವಾಗಿ ಬ್ರೂಸ್ ಪೇಟೆ ಪೊಲೀಸ್ ಠಾಣೆಯಲ್ಲಿ A1 ಜನಾರ್ಧನರೆಡ್ಡಿ, A2, ಶ್ರೀರಾಮಲು A3 ಸೋಮಶೇಖರ್ ರೆಡ್ಡಿ ಹಾಗೂ ಕಾಂಗ್ರೆಸ್ ಶಾಸಕ ಭರತ್ ರೆಡ್ಡಿ ಸತೀಶ್ ರೆಡ್ಡಿ A4 ಆರೋಪಿ ಎಂದು ಸುಮೋಟೋ ಕೇಸ್ ದಾಖಲಿಸಿಕೊಳ್ಳಲಾಗಿದೆ. ಪೊಲೀಸರ ಕರ್ತವ್ಯಕ್ಕೆ ಅಡ್ಡಿ ಹಾಗೂ ಪೋಲೀಸರ ಮೇಲೆ ಕಲ್ಲುತೂರಾಟ ನಡೆಸಿದ್ದು ಡಿವೈಎಸ್ಪಿ ಚಂದ್ರಕಾಂತ ದೂರಿನ ಮೇರೆಗೆ ರೆಡ್ಡಿ ವಿರುದ್ಧ ಸೋಮೊಟೊ ಕೇಸ್ ದಾಖಲಾಗಿದೆ.
ವಾಲ್ಮೀಕಿ ಪುತ್ಥಳಿ ಅನಾವರಣ ನಿಮಿತ್ಯ ಜನಾರ್ಧನ ರೆಡ್ಡಿ ಮನೆ ಬಳಿ ಬ್ಯಾನರ್ ಆಳವಡಿಕೆ ಮಾಡಲಾಗಿತ್ತು. ಅಳವಡಿಸಿದ್ದ ಬ್ಯಾನರ್ ಅನ್ನು ಜನಾರ್ಧನ ರೆಡ್ಡಿ ಬೆಂಬಲಿಗರು ಕಿತ್ತು ಹಾಕಿದ್ದರು. ಅಂದು ಸಂಜೆ ಆರು ಗಂಟೆಗೆ ಸತೀಶ್ ರೆಡ್ಡಿ ಮತ್ತು ಆತನ ಬೆಂಬಲಿಗರು ಸ್ಥಳಕ್ಕೆ ಬಂದಿದ್ದರು. ಆಗ ಜನಾರ್ದನ ರೆಡ್ಡಿ ಮತ್ತು ಸತೀಶ್ ರೆಡ್ಡಿ ಬೆಂಬಲರ ನಡುವೆ ಕಲ್ಲುತೂರಾಟ ಆಗಿದೆ. ಆ ಸಂದರ್ಭದಲ್ಲಿ ಪೊಲೀಸರು ಪರಿಸ್ಥಿತಿ ನಾಯಕರು ಭೇಟಿ ನೀಡಿದ್ದರು. ಮಾಜಿ ಸಚಿವ ಶ್ರೀರಾಮುಲು ಮಾಜಿ ಶಾಸಕ ಸೋಮಶೇಖರ್ ರೆಡ್ಡಿ, ಜನಾರ್ದನ ರೆಡ್ಡಿ ಬೆಂಬಲಿಗರೊಂದಿಗೆ ಬಂದಿದ್ದು ಪರಿಸ್ಥಿತಿ ಮತ್ತಷ್ಟು ಹದಗೆಟ್ಟಿತ್ತು.
ಆ ಬಳಿಕ ತಮ್ಮ ಬೆಂಬಲಿಗರ ಜೊತೆಗೆ ಶಾಸಕ ನಾರಾ ಭರತ ರೆಡ್ಡಿ ಬಂದಿದ್ದಾರೆ. ಈ ವೇಳೆ ಇಬ್ಬರ ಬೆಂಬಲಿಗರಿಂದ ಕಲ್ಲು ತೂರಾಟ ದೊಣ್ಣೆಯಿಂದ ಬಡಿದಾಟ ನಡೆದಿದೆ. ಈ ವೇಳೆ ಕರ್ತವ್ಯದಲ್ಲಿ ಇದ್ದಂತಹ ಪೊಲೀಸ್ ಸಿಬ್ಬಂದಿಗಳಿಗೂ ಪೆಟ್ಟು ಬಿದ್ದಿದೆ. Dysp, ಸಿಬ್ಬಂದಿಗಳಾದ ಶ್ರೀನಿವಾಸ್,ಮಂಜುನಾಥ ಸೇರಿ ಹಲವರಿಗೆ ಗಾಯಗಳಾಗಿದ್ದು, ಕರ್ತವ್ಯಕ್ಕೆ ಜನಾರ್ಧನ ರೆಡ್ಡಿ ಬೆಂಬಲಿಗರು ಹಾಗೂ ಸತೀಶ್ ಬೆಂಬಲಿಗರು ಅಡ್ಡಿಪಡಿಸಿದ್ದಾರೆ. ಕಾನೂನು ಕ್ರಮ ಆಗಬೇಕು ಅಂತ ದೂರು ಹಿನ್ನೆಲೆಯಲ್ಲಿ FIR ದಾಖಲಾಗಿದೆ.








