ಮಂಡ್ಯ : ಮಂಡ್ಯ ಜಿಲ್ಲೆಯಲ್ಲಿ ಮೊದಲ ಕೊರೊನಾ ಕೇಸ್ ಪತ್ತೆಯಾಗಿದ್ದು, ಹರಕೆರೆ ಗ್ರಾಮದ 60 ವರ್ಷದ ವೃದ್ಧೆಗೆ ಕೊರೊನಾ ಸೋಂಕು ದೃಢಪಟ್ಟಿದೆ.
ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಹರಕೆರೆ ಗ್ರಾಮದ 60 ವರ್ಷದ ವೃದ್ಧೆಗೆ ಕೊರೊನಾ ಸೋಂಕು ದೃಢಪಟ್ಟಿದೆ. ಎರಡು ದಿನಗಳಿಂದ ವೃದ್ಧೆಗೆ ಜ್ವರ, ನೆಗಡಿ, ಕೆಮ್ಮು ಇತ್ತು. ಕೋವಿಡ್ ಟೆಸ್ಟ್ ವೇಳೆ ವೃದ್ಧೆಗೆ ಕೊರೊನಾ ಸೋಂಕು ದೃಢಪಟ್ಟಿದೆ.
ಸದ್ಯ ಸೋಂಕಿತ ವೃದ್ಧೆಗೆ ಮಂಡ್ಯ ಮಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.