ಹಾವೇರಿ : ರಾಜ್ಯದಲ್ಲಿ ಡೆಂಗ್ಯೂ ಜ್ವರದ ಅಬ್ಬರದ ನಡುವೆ ಇಲಿ ಜ್ವರದ ಆತಂಕ ಎದುರಾಗಿದ್ದು, ಹಾವೇರಿ ಜಿಲ್ಲೆಯಲ್ಲಿ ಇಲಿ ಜ್ವರಕ್ಕೆ ಮೊದಲ ಬಲಿಯಾಗಿದೆ.
ಹಾವೇರಿ ಜಿಲ್ಲೆಯ ಹಾನಗಲ್ಲ ತಾಲೂಕಿನ ಅರಳೇಶ್ವರ ಗ್ರಾಮದ ಉಮೇಶ್ (೭೨) ಇಲಿಜ್ವರದಿಂದ ಮೃತಪಟ್ಟಿದ್ದಾರೆ. ಇಲಿ ಜ್ವರ ದೃಢಪಟ್ಟ ಹಿನ್ನೆಲೆಯಲ್ಲಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಎರಡು ದಿನಗಳ ಹಿಂದೆಯೇ ಮೃತಪಟ್ಟಿದ್ದಾರೆ.
ಇನ್ನೂ ಹಾವೇರಿ ತಾಲೂಕಿನಲ್ಲೂ ಬಾಲಕನಿಗೆ ಇಲಿ ಜ್ವರ ದೃಢಪಟ್ಟಿದ್ದು, ಹಾವೇರಿಯ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.