ಮುಂಬೈ : ಭಾರತದಲ್ಲಿ ಗಿಲ್ಲೈನ್-ಬರ್ರೆ ಸಿಂಡ್ರೋಮ್ ಮೊದಲ ಬಲಿಯಾಗಿದ್ದು, ಮಹಾರಾಷ್ಟ್ರದಲ್ಲಿ ಗಿಲ್ಲೆನ್-ಬ್ಯಾರಿ ಸಿಂಡ್ರೋಮ್ ಸೋಂಕಿಗೆ ತುತ್ತಾಗಿದ್ದ ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ.
ಮಹಾರಾಷ್ಟ್ರದ ಸೋಲಾಪುರ ಜಿಲ್ಲೆಯಲ್ಲಿ ಗಿಲ್ಲೆನ್-ಬ್ಯಾರಿ ಸಿಂಡ್ರೋಮ್ (ಜಿಬಿಎಸ್) ಸೋಂಕಿಗೆ ಒಳಗಾಗಿದ್ದ ವ್ಯಕ್ತಿಯೊಬ್ಬರು ಸಾವನ್ನಪ್ಪಿದ್ದಾರೆ ಎಂದು ಆರೋಗ್ಯ ಅಧಿಕಾರಿಗಳು ತಿಳಿಸಿದ್ದಾರೆ. ಅಪರೂಪದ ನರ ಅಸ್ವಸ್ಥತೆಯಾದ ಜಿಬಿಎಸ್ ಪುಣೆಯಲ್ಲಿ 73 ಜನರ ಮೇಲೆ ಪರಿಣಾಮ ಬೀರಿದೆ ಮತ್ತು ಇದು ಮಾರಣಾಂತಿಕ ಸ್ಥಿತಿಯಾಗಿದೆ. “ಒಟ್ಟು ಜಿಬಿಎಸ್ ಪ್ರಕರಣಗಳ ಸಂಖ್ಯೆ 73 ಕ್ಕೆ ಏರಿದೆ, ಇದರಲ್ಲಿ 47 ಪುರುಷರು ಮತ್ತು 26 ಮಹಿಳೆಯರು ಸೇರಿದ್ದಾರೆ. ಈ ಪೈಕಿ 14 ಮಂದಿ ವೆಂಟಿಲೇಟರ್ ಬೆಂಬಲದಲ್ಲಿದ್ದಾರೆ ಎಂದು ಆರೋಗ್ಯ ಇಲಾಖೆಯ ಅಧಿಕಾರಿಯೊಬ್ಬರು ಮಾಧ್ಯಮಗಳಿಗೆ ತಿಳಿಸಿದ್ದಾರೆ.
ಗಿಲ್ಲೆನ್-ಬ್ಯಾರಿ ಸಿಂಡ್ರೋಮ್ ಲಕ್ಷಣಗಳೇನು?
ಗುಲ್ಲೆನ್-ಬಾರ್ ಸಿಂಡ್ರೋಮ್ ಅಪರೂಪದ ನರವೈಜ್ಞಾನಿಕ ಅಸ್ವಸ್ಥತೆಯಾಗಿದ್ದು, ಇದರಲ್ಲಿ ಬಾಹ್ಯ ನರಮಂಡಲವು ದೇಹದ ಪ್ರತಿರಕ್ಷಣಾ ವ್ಯವಸ್ಥೆಯಿಂದ ದಾಳಿಗೊಳಗಾಗುತ್ತದೆ ಎಂದು ವಿಶ್ವ ಆರೋಗ್ಯ ಸಂಸ್ಥೆ ತಿಳಿಸಿದೆ. ಬ್ಯಾಕ್ಟೀರಿಯಾ ಅಥವಾ ವೈರಸ್ ಸೋಂಕಿಗೆ ಒಳಗಾದ ಜನರಲ್ಲಿ ಸಿಂಡ್ರೋಮ್ ಕಂಡುಬರುತ್ತದೆ.
ಗಿಲ್ಲೆನ್-ಬ್ಯಾರಿ ಸಿಂಡ್ರೋಮಿನ ಮುಖ್ಯ ಲಕ್ಷಣಗಳೆಂದರೆ ಕಾಲು, ತೋಳುಗಳ ಮತ್ತು ಮುಖದ ನರಗಳ ದೌರ್ಬಲ್ಯ, ಮೈ ಜುಮ್ಮೆನಿಸುವಿಕೆ, ಸ್ನಾಯುಗಳಲ್ಲಿ ಶಕ್ತಿಯಿಲ್ಲದಿರುವುದು ಮತ್ತು ಎದೆಯ ಸ್ನಾಯುಗಳು ದುರ್ಬಲವಾಗಿ ಉಸಿರಾಟ ಕಷ್ಟವಾಗುವುದು (ಶೇಕಡಾ 20ರಿಂದ 30ರಷ್ಟು ಜನರಲ್ಲಿ). ತೀವ್ರ ಸಮಸ್ಯೆಯಾಗಿದ್ದಲ್ಲಿ ಮಾತನಾಡಲು ಮತ್ತು ಆಹಾರ ನುಂಗಲು ಕಷ್ಟವಾಗುವುದು. ಇಂತಹ ಪ್ರಕರಣಗಳನ್ನು ಅಪಾಯಕಾರಿ ಎಂದು ಪರಿಗಣಿಸಲಾಗುತ್ತದೆ. ಒಟ್ಟಾರೆ ಹೇಳುವುದಾದರೆ ಗಿಲ್ಲೆನ್-ಬ್ಯಾರಿ ಸಿಂಡ್ರೋಮ್ ಉಸಿರಾಟ, ರಕ್ತದ ಸೋಂಕು, ಶ್ವಾಸಕೋಶದ ಹೆಪ್ಪುಗಟ್ಟುವಿಕೆ ಅಥವಾ ಹೃದಯ ಸ್ತಂಭನವನ್ನು ನಿಯಂತ್ರಿಸುವ ಸ್ನಾಯುಗಳ ಪಾರ್ಶ್ವವಾಯುವನ್ನು ಒಳಗೊಂಡಿದೆ.