ಮೈಸೂರು : ಕಲುಷಿತ ನೀರು ಸೇವಿಸಿ ಇಬ್ಬರು ಮಕ್ಕಳು ಹಾಗೂ ಮೂವರು ಮಹಿಳೆಯರು ಸೇರಿದಂತೆ ಐವರು ಸ್ಪಷ್ಟ ಗೊಂಡಿರುವ ಘಟನೆ ಮೈಸೂರು ತಾಲೂಕಿನ ಕೆ.ಸಾಲುಂಡಿ ಎಂಬ ಗ್ರಾಮದಲ್ಲಿ ನಡೆದಿದೆ.
ಕೆ ಸಾಲುಂಡಿ ಗ್ರಾಮದಲ್ಲಿ ಕಲುಷಿತ ನೀರು ಸೇವಿಸಿ ಅವರು ಅಸ್ವಸ್ಥರಾಗಿದ್ದಾರೆ. ಮೈಸೂರು ತಾಲೂಕಿನ ಕೆ.ಸಾಲುಂಡಿ ಗ್ರಾಮದಲ್ಲಿ ಘಟನೆ ನಡೆದಿದೆ.ಅಸ್ವಸ್ಥಗೊಂಡ ಇಬ್ಬರು ಮಕ್ಕಳು ಮೂರು ಮಹಿಳೆಯರಿಗೆ ಇದೀಗ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿದುಬಂದಿದೆ.
ನೀರು ಸೇವಿಸಿ ಗ್ರಾಮಸ್ಥರಲ್ಲಿ ವಾಂತಿ ಭೇದಿ ಕಾಣಿಸಿಕೊಂಡಿದೆ. ಹಾಗಾಗಿ ಅಸ್ವಸ್ಥಗೊಂಡ ಐವರಿಗೂ ವಿವಿಧ ಆಸ್ಪತ್ರೆಗಳಲ್ಲಿ ಇದೀಗ ಚಿಕಿತ್ಸೆ ನೀಡಲಾಗುತ್ತಿದೆ. ತಕ್ಷಣ ಗ್ರಾಮಕ್ಕೆ ವೈದ್ಯಾಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ.