ಬೀದರ್ : ಉತ್ತರ ಪ್ರದೇಶದ ಪ್ರಯಾಗ್ ರಾಜ್ ನಲ್ಲಿ ನಡೆಯುತ್ತಿರುವ ಕುಂಭಮೇಳಕ್ಕೆ ತೆರಳಿದ್ದ ರಾಜ್ಯದ ಬೀದರ್ ಜಿಲ್ಲೆಯ ಐವರು ಭೀಕರ ಅಪಘಾತದಲ್ಲಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ವರದಿಯಾಗಿದೆ.
ಹೌದು ಉತ್ತರ ಪ್ರದೇಶದಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ರಾಜ್ಯದ ಐವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ. ಪ್ರಯಾಗ್ ರಾಜ್ ನಲ್ಲಿ ನಡೆಯುತ್ತಿರುವ ಕುಂಭಮೇಳಕ್ಕೆ ಬೀದರ್ ಜಿಲ್ಲೆಯ ಐವರು ತೆರಳಿದ್ದರು. ಈ ವೇಳೆ ಭೀಕರ ಅಪಘಾತದಲ್ಲಿ ಸ್ಥಳದಲ್ಲೇ ಐವರು ಸಾವನ್ನಪ್ಪಿದ್ದಾರೆ. ಇನ್ನು ಘಟನೆಯಲ್ಲಿ 6 ಜನರ ಸ್ಥಿತಿ ಚಿಂತಾಜನಕವಾಗಿದ್ದು, ಸಾವಿನ ಸಂಖ್ಯೆ ಮತ್ತಷ್ಟು ಏರಿಕೆಯಾಗುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.
ಕುಂಭಮೇಳ ಮುಗಿಸಿ ಕಾಶಿಗೆ ಹೋಗುವಾಗ ಈ ಒಂದು ಅಪಘಾತ ಸಂಭವಿಸಿದೆ. ಉತ್ತರಪ್ರದೇಶದ ರೂಪಾಪೂರ ಬಳಿ ಲಾರಿಗೆ ಈ ಕ್ರೂಜರ್ ಡಿಕ್ಕಿಯಾಗಿದೆ. ಲಾರಿ ಕ್ರೂಜರ್ ನಡುವೆ ಡಿಕ್ಕಿಯಾಗಿ ಬೀದರ್ ಜಿಲ್ಲೆಯ ಲಾಡಿಗೇರ ಬಡಾವಣೆ ನಿವಾಸಿಗಳು ಐದು ಜನ ಸಾವನಪ್ಪಿದ್ದಾರೆ. ಸುನೀತಾ, ಸಂತೋಷ ಹಾಗೂ ನೀಲಮ್ಮ ಸೇರಿ ಐದು ಮಂದಿ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ. ಇನ್ನು ಘಟನೆಯಲ್ಲಿ ಉಳಿದ ಪ್ರಯಾಣಿಕರ ಸ್ಥಿತಿ ಚಿಂತಾಜನಕವಾಗಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.