ಕೊಪ್ಪಳ : ಮನೆಯಲ್ಲಿ ಗ್ಯಾಸ್ ಗೀಸರ್ ಸ್ಫೋಟಗೊಂಡು ಮನೆಯಲ್ಲಿದ್ದ ಐವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಗಂಗಾವತಿ ನಗರದ ಸಾರಿಗೆ ಬಸ್ ಡಿಪೋ ಸಮೀಪದ ಕಾಲೋನಿಯಲ್ಲಿ ನಡೆದಿದೆ.
ಘಟನೆಯಲ್ಲಿ ಕವಿತಾ, ಪ್ರೀತಿ, ಶೋಭಾ, ಶೃತಿ, ಭಾಗ್ಯಮ್ಮ ಎನ್ನುವವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಕೂಡಲೇ ಅವರನ್ನು ಗಂಗಾವತಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಇನ್ನು ಕವಿತಾ ಎಂಬುವವರ ಸ್ಥಿತಿ ಗಂಭೀರವಾಗಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಬಳ್ಳಾರಿ ಆಸ್ಪತ್ರೆಗೆ ರವಾನಿಸಲಾಗಿದೆ.
ಅಲ್ಲದೇ ಇನ್ನುಳಿದವರನ್ನು ಗಂಗಾವತಿಯ ಉಪವಿಭಾಗ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನಡೆಸಿ, ಹೆಚ್ಚಿನ ಚಿಕಿತ್ಸೆಗಾಗಿ ಕೊಪ್ಪಳದ ಜಿಲ್ಲಾ ಆಸ್ಪತ್ರೆಗೆ ರವಾನಿಸಲಾಗಿದೆ.ಘಟನಾ ಸ್ಥಳಕ್ಕೆ ಅಗ್ನಿ ಶಾಮಕದಳ ಹಾಗೂ ಗಂಗಾವತಿ ನಗರ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದು, ಪ್ರಕರಣವನ್ನು ದಾಖಲಿಸಿಕೊಂಡಿದ್ದಾರೆ.