ದಾವಣಗೆರೆ : ದಾವಣಗೆರೆಯಲ್ಲಿ ಘೋರ ದುರಂತ ಒಂದು ಸಂಭವಿಸಿದ್ದು, ಸಿಲಿಂಡರ್ ಸ್ಪೋಟಗೊಂಡ ಪರಿಣಾಮ ಐವರ ಸ್ಥಿತಿ ಗಂಭೀರವಾಗಿರುವ ಘಟನೆ ದಾವಣಗೆರೆಯ ಎಸ್ ಜಿ ಓ ಕಾಲೋನಿಯಲ್ಲಿ ಈ ಒಂದು ದುರ್ಘಟನೆ ದುರ್ಘಟನೆ ಸಂಭವಿಸಿದೆ.

ಘಟನೆಯಲ್ಲಿ ತಾಯಿ ಪಾರಮ್ಮ, ಮಗ ಪ್ರವೀಣ, ಸೊಸೆ ಭಾಗ್ಯ ಹಾಗೂ ಇಬ್ಬರು ವೃದ್ಧ ದಂಪತಿಗೆ ಗಂಭೀರವಾದ ಗಾಯಗಳಾಗಿದ್ದು, ತಕ್ಷಣ ಅವರನ್ನು ಗಾಯಾಳುಗಳಿಗೆ ದಾವಣಗೆರೆಯ ಜಿಲ್ಲಾ ಆಸ್ಪತ್ರೆಯಲ್ಲಿ ಇದೀಗ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿದುಬಂದಿದೆ.

ವೃದ್ಧ ದಂಪತಿ ಮನೆಯಲ್ಲಿ ಸಿಲಿಂಡರ್ ಸೋರಿಕೆಯಾಗಿತ್ತು. ಈ ವೇಳೆ ನೋಡಲು ಹೋದಾಗ ಸಿಲಿಂಡರ್ ಸ್ಫೋಟಗೊಂಡಿದೆ. ಘಟನೆಯಲ್ಲಿ ವೃದ್ಧ ದಂಪತಿ ಸೇರಿದಂತೆ ಮೂವರಿಗೆ ಗಂಭೀರವಾದ ಗಾಯಗಳಾಗಿವೆ. ಘಟನೆ ಕುರಿತಂತೆ ದಾವಣಗೆರೆ ವಿದ್ಯಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share.
Exit mobile version