ಕೋಲಾರ : ತಮಿಳುನಾಡಿನಲ್ಲಿ ಮತ್ತೊಂದು ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಕೋಲಾರ ಮೂಲದ ಐವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ.ತಮಿಳುನಾಡಿನ ರಾಣಿಪೇಟೆ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಕೋಲಾರ ಮೂಲದ ಐವರು ಸ್ಥಳದಲ್ಲೇ ಸಾವನ್ನಪ್ಪಿರುವುದಾಗಿ ವರದಿಯಾಗಿದೆ.
ಬಸ್ ಕ್ಯಾಂಟರ್ ಲಾರಿ ನಡುವೆ ಡಿಕ್ಕಿಯಾಗಿ ಕ್ಯಾಂಟರ್ ನಲ್ಲಿ ನಾಲ್ವರು ಹಾಗೂ ಸಾರಿಗೆ ಬಸ್ ನಲ್ಲಿದ್ದ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ.
ರಾಣಿಪೇಟೆಯ ರಾಣಿಪೇಟೆ ಬಳಿ ಮೇಲ್ಮರುವತ್ತೂರಿನ ಭಕ್ತರನ್ನು ಹೊತ್ತೊಯ್ಯುತ್ತಿದ್ದ ಬಸ್‌ಗೆ ಚೆನ್ನೈ ಕಡೆಗೆ ತರಕಾರಿ ಸಾಗಿಸುತ್ತಿದ್ದ ಲಾರಿ ಡಿಕ್ಕಿ ಹೊಡೆದಿದೆ. ಈ ಅಪಘಾತದಲ್ಲಿ ಲಾರಿ ಚಾಲಕ ಸೇರಿ ಐವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಗಂಭೀರವಾಗಿ ಗಾಯಗೊಂಡಿದ್ದ 30ಕ್ಕೂ ಹೆಚ್ಚು ಜನರನ್ನು ರಕ್ಷಿಸಿ ವಾಲಾಜಪೇಟೆಗೆ ರವಾನಿಸಲಾಗಿದೆ.