ಜೈಪುರ : ರಾಜಸ್ಥಾನದ ಜೈಪುರದಲ್ಲಿ ಘೋರ ದುರಂತವೊಂದು ಸಂಭವಿಸಿದ್ದು, ಭೀಕರ ಅಗ್ನಿ ಅವಘಡ ಸಂಭವಿಸಿ ಮೂವರು ಮಕ್ಕಳು ಸೇರಿದಂತೆ ಐವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಜೈಸಲ್ಯ ಗ್ರಾಮದಲ್ಲಿನ ಮನೆಯೊಂದರಲ್ಲಿ ಸಂಭವಿಸಿದ ಭೀಕರ ಬೆಂಕಿ ದುರಂತದಲ್ಲಿ ಐವರು ಸಜೀವ ದಹನವಾಗಿದ್ದಾರೆ. ವಿಶ್ವಕರ್ಮದ ಜೈಸಲ್ಯ ಗ್ರಾಮದಲ್ಲಿ ಸಂಭವಿಸಿದ ಬೆಂಕಿಯಲ್ಲಿ ಮೂವರು ಮುಗ್ಧ ಮಕ್ಕಳು ಸೇರಿದಂತೆ ಇಡೀ ಕುಟುಂಬ ಸಾವನ್ನಪ್ಪಿತು. ಬೆಂಕಿ ಅವಘಡಕ್ಕೆ ಕಾರಣ ತಿಳಿದುಬಂದಿಲ್ಲ. ಮೃತರೆಲ್ಲರೂ ಬಿಹಾರ ಮೂಲದವರು ಎಂದು ಹೇಳಲಾಗಿದೆ. ಪೊಲೀಸರು ಎಫ್ಎಸ್ಎಲ್ ತಂಡವನ್ನು ಸ್ಥಳಕ್ಕೆ ಕರೆಸಿದ್ದಾರೆ.
ಘಟನೆಯ ಬಗ್ಗೆ ಮುಖ್ಯಮಂತ್ರಿ ಭಜನ್ ಲಾಲ್ ಶರ್ಮಾ ದುಃಖ ವ್ಯಕ್ತಪಡಿಸಿದ್ದಾರೆ. “ಜೈಪುರದ ವಿಶ್ವಕರ್ಮದಲ್ಲಿ ಭೀಕರ ಬೆಂಕಿಯಿಂದಾಗಿ 5 ನಾಗರಿಕರು ಅಕಾಲಿಕ ಸಾವನ್ನಪ್ಪಿದ ಸುದ್ದಿ ಹೃದಯ ವಿದ್ರಾವಕವಾಗಿದೆ. ಮೃತರ ಕುಟುಂಬಸ್ಥರಿಗೆ ದುಃಖ ಭರಿಸುವ ಶಕ್ತಿ ದೇವರುಉ ನೀಡಲಿ ಮತ್ತು ಗಾಯಗೊಂಡವರಿಗೆ ಶೀಘ್ರ ಗುಣಮುಖರಾಗಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇನೆ ಎಂದು ಹೇಳಿದ್ದಾರೆ.