ಹಾವೇರಿ : ನಾಳೆಯಿಂದ ದ್ವಿತೀಯ ಪಿಯು ಪರೀಕ್ಷೆ ಆರಂಭವಾಗಲಿದ್ದು, ಬಳಿಕ SSLC ಪರೀಕ್ಷೆ ಆರಂಭವಾಗಲಿವೆ. ಇದೀಗ ಹಾವೇರಿಯಲ್ಲಿ ಪರೀಕ್ಷೆಗೆ ಹೆದರಿ ಐವರು SSLC ವಿದ್ಯಾರ್ಥಿಗಳು ನಾಪತ್ತೆಯಾಗಿದ್ದಾರೆ. ಅಲ್ಪಸಂಖ್ಯಾತರ ಮೊರಾರ್ಜಿ ವಸತಿ ಶಾಲೆಯ SSLC ವಿದ್ಯಾರ್ಥಿಗಳು ನಾಪತ್ತೆಯಾಗಿದ್ದಾರೆ.
ಹಾವೇರಿ ಜಿಲ್ಲೆಯ ರಾಣೆಬೆನ್ನೂರು ತಾಲೂಕಿನ ಸುಣಕಲಬಿದರಿ ಬಳಿಯ ಮೊರಾರ್ಜಿ ವಸತಿ ಶಾಲೆಯಲ್ಲಿ ನಾಪತ್ತೆಯಾಗಿರುವ ಐವರು ಮಕ್ಕಳ ಮಾಹಿತಿಯನ್ನು ಅಧಿಕಾರಿಗಳು ಮುಚ್ಚಿಡುತ್ತಿದ್ದಾರೆ. ಮಕ್ಕಳು ಇದ್ದಾರೆ ಸಿಕ್ಕಿದ್ದಾರೆ ಅಂತ ಹೆಡ್ ಮಾಸ್ಟರ್ ನಾಗರಾಜ್ ಹೇಳುತ್ತಿದ್ದರೆ, ಮಕ್ಕಳು ಬೇರೆ ಕಡೆ ಇದ್ದಾರೆ ಎಂದು ಅಧಿಕಾರಿಗಳು ಹಾರಿಕೆ ಉತ್ತರ ನೀಡುತ್ತಿದ್ದಾರೆ.
ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಅಧಿಕಾರಿ ಅಬ್ದುಲ್ ಮಿರಜ್ ಉತ್ತರ ನೀಡುತ್ತಿದ್ದಾರೆ. ಅಲ್ಪಸಂಖ್ಯಾತರ ವಸತಿ ಶಾಲೆಯಲ್ಲಿ ನಿನ್ನೆ ರಾತ್ರಿ ವಾಚ್ ಮನ್ ಇರಲಿಲ್ಲ. ಎಸ್ ಎಸ್ ಎಲ್ ಸಿ ಪೂರ್ವಭಾವಿ ಪರೀಕ್ಷೆಗಳು ನಡೆಯುತ್ತಿದ್ದವು. ಪರೀಕ್ಷೆಗೆ ಹೆದರಿ ವಿದ್ಯಾರ್ಥಿಗಳು ಪರಾರಿಯಾಗಿದ್ದಾರೆ ಎಂದು ಮಾಹಿತಿ ಲಭ್ಯವಾಗಿದೆ. ನಾಪತ್ತೆಯಾಗಿರುವ ಮಕ್ಕಳಿಗಾಗಿ ಹೆಡ್ ಮಾಸ್ಟರ್ ಮತ್ತು ಶಾಲಾ ಸಿಬ್ಬಂದಿಗಳು ಹುಡುಕಾಟ ನಡೆಸುತ್ತಿದ್ದಾರೆ.








