ಮಂಡ್ಯ : ಬಿಜೆಪಿ-ಜೆಡಿಎಸ್ ಪಾದಯಾತ್ರೆ ನಡೆಯುತ್ತಿರುವ ಹೊತ್ತಲ್ಲೇ ಮಂಡ್ಯದಲ್ಲಿ ಮಾಜಿ ಶಾಸಕ ಪ್ರೀತಂಗೌಡ ಭಾವಚಿತ್ರವಿದ್ದ ಫ್ಲೆಕ್ಸ್ ಗೆ ಕಿಡಿಗೇಡಿಗಳು ಬೆಂಕಿ ಹಚ್ಚಿರುವ ಘಟನೆ ನಡೆದಿದೆ.
ಮಂಡ್ಯ ಹೊರವಲಯದ ಉಮ್ಮಡಹಳ್ಳಿ ಸಮೀಪ ಬಿಜೆಪಿಯ ಮಾಜಿ ಶಾಸಕ ಪ್ರೀತಂಗೌಡ ಭಾವಚಿತ್ರವಿದ್ದ ಬ್ಯಾನರ್ ಗೆ ಪೆಟ್ರೋಲ್ ಹಾಕಿ ದುಷ್ಕರ್ಮಿಗಳು ಸುಟ್ಟು ಹಾಕಿದ್ದಾರೆ.
ಉಮ್ಮಡಹಳ್ಳಿಯಲ್ಲಿ ತಡರಾತ್ರಿ ಈ ಘಟನೆ ನಡೆದಿದ್ದು, ದುಷ್ಕರ್ಮಿಗಳು ಪ್ರೀತಂಗೌಡ ಭಾವಚಿತ್ರವಿದ್ದ ಬ್ಯಾನರ್ ಗೆ ಪೆಟ್ರೋಲ್ ಸುರಿದು ಸುಟ್ಟು ಪರಾರಿಯಾಗಿದ್ದಾರೆ.